ಬೆಂಗಳೂರು: ಇಂದಿನಿಂದ ಆರಂಭವಾಗಿರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ವಿಪ್ ಜಾರಿ ಮಾಡಿದ್ದರೂ ಸಹ ಕಾಂಗ್ರೆಸ್ ಹಾಗೂ ಜೆಡಿಎಸ್’ನ ಹಲವು ಶಾಸಕರು ಗೈರು ಹಾಜರಾಗಿದ್ದು, ಎರಡೂ ಪಕ್ಷಗಳಿಗೆ ಪ್ರಮುಖವಾಗಿ ಕಾಂಗ್ರೆಸ್’ಗೆ ನಡುಕ ಹುಟ್ಟಿಸಿದ್ದಾರೆ.
ಕಾಂಗ್ರೆಸ್ ತನ್ನ ಶಾಸಕರಿಗೆ ವಿಪ್ ಜಾರಿ ಮಾಡಿತ್ತು. ಈ ಕಾರಣದಿಂದ ಕಳೆದ ಕೆಲವು ದಿನಗಳಿಂದ ತಲೆ ಮರೆಸಿಕೊಂಡಿರುವ ಏಳು ಜನ ಕಾಂಗ್ರೆಸ್ ಶಾಸಕರು ಇಂದಾದರೂ ಸದನಕ್ಕೆ ಆಗಮಿಸಬಹುದೆಂಬ ನಿರೀಕ್ಷೆಯಿತ್ತು. ಆದರೆ ಎಳೂ ಜನ ಶಾಸಕರು ಸದನಕ್ಕೆ ಗೈರಾಗಿದ್ದಾರೆ.
ಒಟ್ಟಾರೆಯಾಗಿ ಇಂದು ಸದನಕ್ಕೆ ದೋಸ್ತಿ ಸರಕಾರದ 8 ಜನ ಶಾಸಕರು ಮತ್ತು 2 ಜನ ಪಕ್ಷೇತರರು ಗೈರಾಗಿದ್ದಾರೆ.
ಕಾಂಗ್ರೆಸ್ ಶಾಸಕರಾದ ಬಿ. ನಾಗೇಂದ್ರ, ಜೆ.ಎನ್. ಗಣೇಶ್, ಉಮೇಶ್ ಜಾಧವ್, ಮಹೇಶ್ ಕುಮಠಹಳ್ಳಿ, ಬಿ.ಸಿ. ಪಾಟೀಲ್, ರಾಮಪ್ಪ ಮತ್ತು ರಮೇಶ್ ಜಾರಕಿಹೊಳಿ ಹಾಗೂ ಜೆಡಿಎಸ್ ನ ಕೆ.ಆರ್. ಪೇಟೆ ಶಾಸಕ ನಾರಾಯಣ ಗೌಡ ಮತ್ತು ಪಕ್ಷೇತರ ಶಾಸಕರಾಗಿರುವ ನಾಗೇಶ್ ಹೆಚ್. ಮತ್ತು ಮಾಜಿ ಸಚಿವ ಆರ್. ಶಂಕರ್ ಅವರು ಗೈರಾಗಿದ್ದಾರೆ.
Discussion about this post