ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕಾರ್ಯದ ಅಂಗವಾಗಿ ಶಿವಮೊಗ್ಗ ದಕ್ಷಿಣ ಬ್ಲಾಕ್‍ನ 16 ವಾರ್ಡ್‍ಗಳ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ, ಅಲ್ಲಿನ ಬೂತ್ ಮಟ್ಟದ ಅಧಿಕಾರಿಗಳನ್ನು (BLO) ಭೇಟಿ ಮಾಡಿ ಕಾರ್ಯದ ಪ್ರಗತಿಯ ಕುರಿತು ಮಾಹಿತಿ ಪಡೆಯಲಾಯಿತು.
ಈ ವೇಳೆ ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯ ಎಷ್ಟರ ಮಟ್ಟಿಗೆ ಪೂರ್ಣಗೊಂಡಿದೆ, ಕಾರ್ಯನಿರ್ವಹಣೆಯಲ್ಲಿ ಎದುರಾಗುತ್ತಿರುವ ಸವಾಲುಗಳು ಹಾಗೂ ಉಳಿದಿರುವ ಕಾರ್ಯಗಳ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಯಿತು.
ವಿಶೇಷ ತೀವ್ರ ಪರಿಷ್ಕರಣೆ ಕಾರ್ಯ ಸುಗಮವಾಗಿ ನಡೆಯಲು ಅಗತ್ಯವಿದ್ದರೆ ಕಾಂಗ್ರೆಸ್ ಪಕ್ಷದ ಬೂತ್ ಲೆವೆಲ್ ಏಜೆಂಟ್‍ಗಳು ಸಂಪೂರ್ಣ ಸಹಕಾರ ನೀಡಲಿದ್ದಾರೆ ಎಂದು ತಿಳಿಸಲಾಯಿತು.
Also read: ಕಾಲಾತೀತ ದೃಷ್ಟಿಕೋನದಿಂದ ಬದುಕನ್ನು ಅವಲೋಕಿಸಿ: ಬಿದರಗೋಡು ನಾಗೇಶ್
ಈ ಸಂದರ್ಭದಲ್ಲಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲೀಂ ಪಾಶಾ, ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ. ಪಲ್ಲವಿ, 2023ರ ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಸಿ.ಯೋಗೇಶ್, ಮಾಜಿ ಮೇಯರ್ ನಾಗರಾಜ್ ಕಂಕರಿ, ದಕ್ಷಿಣ ಬ್ಲಾಕ್‍ನ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸುವರ್ಣ ನಾಗರಾಜ್ ಹಾಗೂ ಡಿಸಿಸಿನ ಪ್ರಧಾನ ಕಾರ್ಯದರ್ಶಿ ಶಿವಾನಂದ್‍ರವರು, ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 









