ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಸರ್ಕಾರದ ನಡುವೆ ಎಲ್ಲವೂ ಸರಿ ಇಲ್ಲ ಎನ್ನುವುದಕ್ಕೆ ಸಾಕ್ಷಿಯಾಗಿ ಮೈತ್ರಿ ಸರ್ಕಾರದ ಮೊದಲ ವಿಕೆಟ್ ಪತನಗೊಂಡಿದ್ದು, ಕಾಂಗ್ರೆಸ್ ಶಾಸಕ ಉಮೇಶ್ ಜಾಧವ್ ರಾಜೀನಾಮೆ ನೀಡಿದ್ದಾರೆ.
ಈ ಹಿಂದೆ ಭಿನ್ನಮತೀಯರ ಗುಂಪಿನಲ್ಲಿ ಪ್ರಮುಖವಾಗಿ ಕಾಣಿಸಿಕೊಂಡಿದ್ದ ಕಲಬುರ್ಗಿಯ ಚಿಂಚೋಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಉಮೇಶ್ ಜಾಧವ್, ಖುದ್ದು ಸ್ಪೀಕರ್ ರಮೇಶ್ ಕುಮಾರ್ ಅವರ ನಿವಾಸಕ್ಕೆ ತೆರಳಿ ತಮ್ಮ ರಾಜಿನಾಮೆ ಪತ್ರವನ್ನು ಸಲ್ಲಿಸಿದ್ದಾರೆ.
ಇಂದು ಬೆಳಗ್ಗೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್ ನಲ್ಲಿರುವ ಸ್ಪೀಕರ್ ರಮೇಶ್ ಕುಮಾರ್ ನಿವಾಸಕ್ಕೆ ತೆರಳಿದ್ದ ಉಮೇಶ್ ಜಾಧವ್ ಅವರನ್ನು ತಮ್ಮ ರಾಜಿನಾಮೆ ಪತ್ರ ನೀಡಿದ್ದಾರೆ.
ಇನ್ನು ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಮಾತ್ರ ಬಾಕಿ ಇದ್ದು ಈ ಹಂತದಲ್ಲಿ ಉಮೇಶ್ ಜಾಧವ್ ಅವರ ನಡೆ ಕುತೂಹಲ ಕೆರಳಿಸಿದೆ.
ಮೂಲಗಳ ಪ್ರಕಾರ ಉಮೇಶ್ ಜಾಧವ್ ಅವರು ಲೋಕಸಭಾ ಚುನಾವಣೆಯಲ್ಲಿ ಕಲಬುರಗಿ ಕ್ಷೇತ್ರದಲ್ಲಿ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ಪಕ್ಷದಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
Discussion about this post