ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಅವರನ್ನು ಬೆಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ತಿಮ್ಮಪ್ಪ ಅವರಿಗೆ ಏಕಾಏಕಿ ಜ್ವರ ಕಾಣಿಸಿಕೊಂಡು ಸುಸ್ತಾದ ಹಿನ್ನೆಲೆಯಲ್ಲಿ ಕೊಂಚ ಅಸ್ವಸ್ಥಗೊಂಡರು. ಈ ಹಿನ್ನೆಲೆಯಲ್ಲಿ ಅವರಿಗೆ ಕೋವಿಡ್19 ಪರೀಕ್ಷೆ ನಡೆಸಿದ್ದು, ವರದಿ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ಜಯನಗರ ಅಪೊಲೋ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post