ಕಲ್ಪ ಮೀಡಿಯಾ ಹೌಸ್ | ಬೆಳಗಾವಿ |
ಮಧ್ಯ ಕರ್ನಾಟಕದ ಅತ್ಯಂತ ಸುಸಜ್ಜಿತ ಶಿವಮೊಗ್ಗದ #Shivamogga ವಿಮಾನ ನಿಲ್ದಾಣಕ್ಕೆ #Airport ರಾಷ್ಟ್ರಕವಿ ಕುವೆಂಪು #Kuvempu ಅವರ ಹೆಸರಿಡಲು ವಿಧಾನಮಂಡಲದಲ್ಲಿ ಒಮ್ಮತದ ನಿರ್ಣಯ ಕೈಗೊಳ್ಳಲಾಗಿದೆ.
ಬೆಳಗಾವಿ #Belagavi ವಿಧಾನಮಂಡಲ ಅಧಿವೇಶನದಲ್ಲಿ ಈ ಕುರಿತಂತೆ ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಗಿದ್ದು, ವಿಧಾನಸಭೆಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು ನಿರ್ಣಯವನ್ನು ಮಂಡಿಸಿದರು.
ಎಂ.ಬಿ. ಪಾಟೀಲ್ ಅವರು ಮಂಡಿಸಿದ ನಿರ್ಣಯಕ್ಕೆ ಪಕ್ಷಾತೀತವಾಗಿ ಸರ್ವಾನುಮತದಿಂದ ಅಂಗೀಕಾರ ದೊರೆಯಿತು.
ಅದೇ ರೀತಿ ವಿಧಾನ ಪರಿಷತ್’ನಲ್ಲಿ ಸಚಿವ ಎಚ್.ಕೆ. ಪಾಟೀಲ್ ಅವರು ನಿರ್ಣಣ ಮಂಡಿಸಿದ್ದು, ಅಲ್ಲೂ ಸಹ ಒಮ್ಮತದ ಅಂಗೀಕಾರ ದೊರೆಯಿತು.
ವಿಧಾನ ಮಂಡಲದಲ್ಲಿ ಅಂಗೀಕರಿಸಿದ ನಿರ್ಣಯವನ್ನು ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿ ಕೊಡಲಿದೆ. ನಂತರ ಕೇಂದ್ರ ಸರ್ಕಾರ ಅಧಿಕೃತ ಆದೇಶ ಹೊರಡಿಸಲಿದೆ.
ಯಾವ ನಿಲ್ದಾಣಕ್ಕೆ ಯಾರ ಹೆಸರು?
- ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರು
- ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ
- ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ
- ವಿಜಯಪುರ ವಿಮಾನ ನಿಲ್ದಾಣಕ್ಕೆ ಜಗಜ್ಯೋತಿ ಬಸವಣ್ಣ
(ವರದಿ: ಡಿ.ಎಲ್. ಹರೀಶ್)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post