ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚಳ್ಳಕೆರೆ: ಯಾವುದೇ ಜಾಗದಲ್ಲಿ ನೆಟ್ಟ ಹಸಿರು ಗಿಡಗಳನ್ನು ತಮ್ಮ ಮಕ್ಕಳಂತೆ ಸಂರಕ್ಷಣೆ ಮಾಡಿಕೊಳ್ಳುವ ಅಗತ್ಯವಿದೆ ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು.
ಇಲ್ಲಿನ ಎಚ್‌ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಚಿತ್ರದುರ್ಗ ಸಾಮಾಜಿಕ ವಲಯ ಅರಣ್ಯ ಇಲಾಖೆ ಇವುಗಳ ಆಶ್ರಯದಲ್ಲಿ ಹಸಿರು ನಗರವಲಯ ಯೋಜನೆಯಡಿಯಲ್ಲಿ ಸೋಮವಾರ ಆಯೋಜಿಸಿದ್ದ ಹಸಿರೀಕರಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಹಸಿರು ಸಸ್ಯಗಳಿಂದ ಮನುಷ್ಯನ ಆರೋಗ್ಯ ವೃದ್ಧಿಯಾಗುವುದರ ಜೊತೆಗೆ ಮಾರಕ ರೋಗಗಳು ನಿವಾರಣೆಯಾಗುತ್ತವೆ. ಆದ್ದರಿಂದ ಕಾಲೇಜು ಆವರಣದಲ್ಲಿ ನೆಟ್ಟ 701 ಸಸಿಗಳು ನಾಶವಾಗದಂತೆ ಸದಾ ಎಚ್ಚರಿಕೆವಹಿಸಬೇಕು ಎಂದು ಅರಣ್ಯ ಅಧಿಕಾರಿಗಳು ಹಾಗೂ ಬೋಧಕರಿಗೆ ಸಲಹೆ ನೀಡಿದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು, ಬರಡು ಭೂಮಿ ಹಾಗೂ ಶಾಲಾ ಕಾಲೇಜು ಆವರಣದಲ್ಲಿ ಗಿಡಗಳನ್ನು ಬೆಳೆಸಲು ಮಕ್ಕಳಿಗೆ ಪ್ರೇರಣೆ ನೀಡುವುದರ ಜೊತೆಗೆ ಬೆಳೆಸಲು ಸಂಘ ಸಂಸ್ಥೆಗಳಿಗೆ ಹತ್ತು ಗಿಡಗಳನ್ನು ದತ್ತು ನೀಡಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಎನ್‌ಎಸ್‌ಎಸ್ ಅಧಿಕಾರಿ ಪ್ರೊ.ಎಂ.ಶಿವಲಿಂಗಪ್ಪ, ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ.ಬಿ.ಯು.ನರಸಿಂಹಮೂರ್ತಿ, ಪ್ರೊ.ಲೀಲಾವತಿ, ಸಾಮಾಜಿಕ ಅರಣ್ಯ ಇಲಾಖೆ ವಲಯ ಅಧಿಕಾರಿ ವಿನಯ್, ಸಹಾಯಕ ಅಧಿಕಾರಿ ಬೋರನಾಯಕ ಮಾತನಾಡಿದರು.
ಅರಣ್ಯ ಇಲಾಖೆ ಈರಣ್ಣ, ಚಂದ್ರಹಾಸ, ಕಾಲೇಜಿನ ಸೂಪರಿಡೆಂಟ್ ವಿನೇಶ್, ನಗರಸಭೆ ಸದಸ್ಯರಾದ ಕೆ. ವೀರಭದ್ರಯ್ಯ, ಆರ್. ರಾಘವೇಂದ್ರ, ತಾಲೂಕು ಪಂಚಾಯಿತಿ ಸದಸ್ಯ ಗಿರಿಯಪ್ಪ ಮಾಜಿ ಸದಸ್ಯ ಪರಸಪ್ಪ, ಕಾಂಗ್ರೆಸ್ ಮುಖಂಡ ಎಚ್.ಎಸ್. ಸೈಯದ್, ಡಿ.ಕೆ. ಅನ್ವರ್ ಅಹ್ಮದ್, ರಾಮಾಂಜಿನೇಯ, ಬಸವರಾಜ ಇದ್ದರು.
(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)
Get In Touch With Us info@kalpa.news Whatsapp: 9481252093
Discussion about this post