ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ವಿಶ್ವಕ್ಕೆ ಮಾದರಿಯಾದ ಸಂವಿಧಾನವನ್ನು ಕೊಟ್ಟ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ನಾವೆಲ್ಲರೂ ಕೃತಜ್ಞತೆಯಿಂದ ಪೂಜಿಸಬೇಕು, ಸ್ಮರಿಸಬೇಕು. ಮಾನವ ಕಲ್ಯಾಣದ ಅಭ್ಯುದಯವೇ ನಮ್ಮ ಸಂವಿಧಾನದ ಗುರಿಯಾಗಿದೆ ಎಂದು ಜನ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಎಸ್.ವೈ. ಅರುಣಾದೇವಿ ಅಭಿಪ್ರಾಯಪಟ್ಟರು.
ಜನಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಿದ್ದ 72ನೆಯ ಗಣರಾಜ್ಯೋತ್ಸವದಲ್ಲಿ ಅವರು ಮಾತನಾಡಿದರು.
ಅಶಿಕ್ಷಣ, ಬಡತನ ಹೋಗಲಾಡಿಸಲು ಜನ ಶಿಕ್ಷಣ ಸಂಸ್ಥೆಯು ನೀಡುತ್ತಿರುವ ವೃತ್ತಿ ಕೌಶಲ್ಯ ತರಬೇತಿಗಳು ಸಹಾಯಕವಾಗಿವೆ. ಇದಕ್ಕಾಗಿ ಜನ ಶಿಕ್ಷಣ ಸಂಸ್ಥೆಯ ಫಲಾನುಭವಿಗಳು, ಸಂಪನ್ಮೂಲ ವ್ಯಕ್ತಿಗಳು ಹಾಗು ಸಿಬ್ಬಂಧಿ ವರ್ಗದವರು ಹೆಚ್ಚು ಹೆಚ್ಚು ವೈಜ್ಞಾನಿಕವಾಗಿ ತೊಡಗಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಜನ ಶಿಕ್ಷಣ ಸಂಸ್ಥೆಯ ಫಲಾನುಭವಿಗಳು, ಸಂಪನ್ಮೂಲ ವ್ಯಕ್ತಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post