No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
  • Advertise With Us
  • Grievances
  • About Us
  • Contact Us
Thursday, August 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ-ಭದ್ರಾವತಿಯಲ್ಲಿ ನಾಲ್ಕು ರೈಲ್ವೇ ಮೇಲ್ಸೇತುವೆ ನಿರ್ಮಾಣ ಶೀಘ್ರ ಆರಂಭ: 60.76 ಕೋಟಿ ರೂ. ಬಿಡುಗಡೆ

ಮಾರ್ಚ್ ಮೊದಲ ವಾರದಲ್ಲಿ ರೈಲ್ವೆ ಸಚಿವರು ಶಿವಮೊಗ್ಗಕ್ಕೆ: ಸಂಸದ ರಾಘವೇಂದ್ರ

kalpa News by kalpa News
January 28, 2021
in ಶಿವಮೊಗ್ಗ
0
ಶಿವಮೊಗ್ಗ-ಭದ್ರಾವತಿಯಲ್ಲಿ ನಾಲ್ಕು ರೈಲ್ವೇ ಮೇಲ್ಸೇತುವೆ ನಿರ್ಮಾಣ ಶೀಘ್ರ ಆರಂಭ: 60.76 ಕೋಟಿ ರೂ. ಬಿಡುಗಡೆ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಸಂಚಾರ ದಟ್ಟಣೆಯನ್ನು ತಗ್ಗಿಸುವ ಉದ್ದೇಶದಿಂದ ಶಿವಮೊಗ್ಗ ನಗರ ಮತ್ತು ಭದ್ರಾವತಿಯಲ್ಲಿ ರೈಲ್ವೇ ಮೇಲ್ಸೇತುವೆ ಮತ್ತು ಕೆಳಸೇತುವೆಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಈಗಾಗಲೇ ಅನುದಾನ ಬಿಡುಗಡೆಗೊಳಿಸಿದ್ದು, ಆದಷ್ಟು ಬೇಗನೆ ಕಾಮಗಾರಿ ಆರಂಭಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಂಸತ್ ಸದಸ್ಯ ಬಿ.ವೈ. ರಾಘವೇಂದ್ರ ಅವರು ತಿಳಿಸಿದರು.

ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಕುರಿತು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಶಿವಮೊಗ್ಗ ನಗರದ ಸವಳಂಗ ರಸ್ತೆ ಮತ್ತು ಕಾಶಿಪುರದಲ್ಲಿ ಹಾಗೂ ಭದ್ರಾವತಿಯಲ್ಲಿ ಒಟ್ಟು 4 ರೈಲ್ವೇ ಸೇತುವೆಗಳ ನಿರ್ಮಾಣಕ್ಕೆ ಅನುಮೋದನೆ ದೊರೆತಿದೆ. ಸವಳಂಗ ರಸ್ತೆಯಲ್ಲಿ ರೈಲ್ವೇ ಮೇಲ್ಸೇತುವೆ ಮತ್ತು ಕೆಳಸೇತುವೆ ನಿರ್ಮಾಣಕ್ಕೆ ಸರ್ಕಾರ 60.76 ಕೋಟಿ ರೂ. ಬಿಡುಗಡೆ ಮಾಡಿದೆ. ಇಲ್ಲಿ ಭೂಸ್ವಾಧೀನ ಪ್ರಕ್ರಿಯೆ, ವಿದ್ಯುತ್ ಕಂಬಗಳ ಸ್ಥಳಾಂತರ ಇತ್ಯಾದಿ ಕಾರ್ಯಗಳನ್ನು ಆದಷ್ಟು ಬೇಗನೆ ಪೂರ್ಣಗೊಳಿಸಬೇಕು. ಕಾಶಿಪುರ ರೈಲ್ವೇ ಕ್ರಾಸಿಂಗ್ ಬಳಿ ಮೇಲ್ಸೇತುವೆ ನಿರ್ಮಾಣಕ್ಕೆ 30 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಭದ್ರಾವತಿಯಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ 49ಕೋಟಿ ರೂ. ಬಿಡುಗಡೆಯಾಗಿದೆ ಎಂದರು.

ಪರ್ಯಾಯ ರಸ್ತೆ
ಮಾರ್ಚ್ ಒಂದರಂದು ಎಲ್ಲಾ ಕಾಮಗಾರಿಗಳನ್ನು ಆರಂಭಿಸಲು ಪೂರ್ವಸಿದ್ಧತೆಗಳನ್ನು ಪೂರ್ಣಗೊಳಿಸಬೇಕು. ಎಲ್ಲಾ ರೈಲ್ವೇ ಸೇತುವೆಗಳ ನಿರ್ಮಾಣ ಕಾರ್ಯವನ್ನು ದಾಖಲೆ ಸಮಯದ ಒಳಗಾಗಿ ಪೂರ್ಣಗೊಳಿಸಲು ಸೂಚಿಸಲಾಗಿದೆ. ಕಾಮಗಾರಿ ಅವಧಿಯಲ್ಲಿ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗಗಳನ್ನು ಗುರುತಿಸಲಾಗುತ್ತಿದೆ. ಸಾರ್ವಜನಿಕರಿಗೆ ಹೆಚ್ಚಿನ ಅನಾನುಕೂಲತೆಗಳು ಆಗದಂತೆ ಸೂಕ್ತ ಪರ್ಯಾಯ ರಸ್ತೆಗಳನ್ನು ಕಲ್ಪಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಜಿಲ್ಲೆಯಲ್ಲಿ ರೈಲ್ವೇ ಕೋಚಿಂಗ್ ಡಿಪೋ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಈಗಾಗಲೇ 60 ಕೋಟಿ ರೂ. ಬಿಡುಗಡೆಗೆ ಅನುಮೋದನೆ ನೀಡಿದೆ. ಶಿಕಾರಿಪುರ-ರಾಣೆಬೆನ್ನೂರು ರೈಲ್ವೇ ಹಳಿ ನಿರ್ಮಾಣ ಕಾಮಗಾರಿಯ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದ್ದು, ಪ್ರಥಮ ಹಂತದ ಕಾಮಗಾರಿಗಳಿಗೆ ಟೆಂಡರ್ ಕರೆಯುವ ಪ್ರಕ್ರಿಯೆ ಹಂತದಲ್ಲಿದೆ. ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಭೂಸ್ವಾಧೀನ ಪ್ರಕ್ರಿಯೆ ಮತ್ತು ಕಾಮಗಾರಿಗಳ ಅನುಷ್ಟಾನಗೊಳಿಸಲಾಗುತ್ತಿದೆ. ರಾಜ್ಯ ಸರ್ಕಾರ ತನ್ನ ಪಾಲಿನ ಅನುದಾನವನ್ನು ಈಗಾಗಲೇ ಬಿಡುಗಡೆ ಮಾಡಿದೆ. ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಐತಿಹಾಸಿಕ ಬದಲಾವಣೆಗಳನ್ನು ಕಾಣಬಹುದಾಗಿದೆ ಎಂದರು.
ಕೇಂದ್ರ ರೈಲ್ವೇ ಸಚಿವರ ಆಗಮನ
ಜಿಲ್ಲೆಯಲ್ಲಿ ನಡೆಯುತ್ತಿರುವ ರೈಲ್ವೇ ಯೋಜನೆಗಳಿಗೆ ಚಾಲನೆ ನೀಡಲು ಕೇಂದ್ರ ರೈಲ್ವೇ ಸಚಿವ ಪಿಯೂಷ್ ಗೋಯಲ್ ಅವರು ಮಾರ್ಚ್ ಮೊದಲ ವಾರದಲ್ಲಿ ಶಿವಮೊಗ್ಗ ಆಗಮಿಸುವ ಸಾಧ್ಯತೆಯಿದೆ. ಸಚಿವರು ಆ ಸಂದರ್ಭದಲ್ಲಿ ರೈಲ್ವೇ ಕಾಮಗಾರಿಗಳ ಭೂಮಿಪೂಜೆ ಮತ್ತು ಉದ್ಘಾಟನೆ ಕಾರ್ಯಗಳನ್ನು ನೆರವೇರಿಸಲಿದ್ದಾರೆ ಎಂದು ಅವರು ತಿಳಿಸಿದರು.

ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಮಹಾನಗರ ಪಾಲಿಕೆ ಮೇಯರ್ ಸುವರ್ಣಾ ಶಂಕರ್, ಸೂಡಾ ಅಧ್ಯಕ್ಷ ಜ್ಯೋತಿ ಪ್ರಕಾಶ್, ಆಯುಕ್ತ ಚಿದಾನಂದ ವಟಾರೆ, ರೈಲ್ವೇ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: B Y RaghavendraBhadravathiIndian RailwayKannada News WebsiteLatest News KannadaRailway OverpassShimogaShivamoggaShivamogga Newsಬಿ.ವೈ. ರಾಘವೇಂದ್ರರೈಲ್ವೇ ಮೇಲ್ಸೇತುವೆರೈಲ್ವೇ ಯೋಜನೆಶಿವಮೊಗ್ಗ
Share217Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಎಸ್’ಎಸ್’ಎಲ್’ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಸಂಪೂರ್ಣ ಮಾಹಿತಿ

Next Post

ಭದ್ರಾವತಿ: ಲಂಚ ಸ್ವೀಕರಿಸುವ ವೇಳೆ ಹೊಳೆಹೊನ್ನೂರು ಮೆಸ್ಕಾಂ ಇಂಜಿನಿಯರ್ ಎಸಿಬಿ ಬಲೆಗೆ

kalpa News

kalpa News

Next Post
ಭದ್ರಾವತಿ: ಲಂಚ ಸ್ವೀಕರಿಸುವ ವೇಳೆ ಹೊಳೆಹೊನ್ನೂರು ಮೆಸ್ಕಾಂ ಇಂಜಿನಿಯರ್ ಎಸಿಬಿ ಬಲೆಗೆ

ಭದ್ರಾವತಿ: ಲಂಚ ಸ್ವೀಕರಿಸುವ ವೇಳೆ ಹೊಳೆಹೊನ್ನೂರು ಮೆಸ್ಕಾಂ ಇಂಜಿನಿಯರ್ ಎಸಿಬಿ ಬಲೆಗೆ

Leave a Reply Cancel reply

Your email address will not be published. Required fields are marked *

No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL