ಮಂಗಳೂರು: ಕರಾವಳಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆ ಮುಂದುವರೆದಿದ್ದು, ದಕ್ಷಿಣ ಕನ್ನಡದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಸೋಮವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ತಿಳಿದುಬಂದಿದೆ.
ಇನ್ನು, ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನರಿಗೆ ಮುನ್ನೆಚ್ಚರಿಕೆ ನೀಡಲಾಗಿದ್ದು, ಜನರಿಗೆ ಸಹಾಯವಾಗಲು ದಕ್ಷಿಣ ಕನ್ನಡ ಜಿಲ್ಲೆಯ ತಾಲೂಕುಗಳಲ್ಲಿ ಸಹಾಯವಾಣಿಯನ್ನು ಜಿಲ್ಲಾಡಳಿತ ತೆರೆದಿದೆ.
ಉಡುಪಿ ಹಾಗೂ ಮಂಗಳೂರಿನ ಹೊರವಲಯದ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. ಜನರ ರಕ್ಷಣೆಗೆ ಧಾವಿಸಿರುವ ರಾಷ್ಟ್ರೀಯ ಭದ್ರತಾ ರಕ್ಷಣಾ ಪಡೆಯ 30 ಮಂದಿ ತಂಡ ಇಂದು ಮಂಗಳೂರಿಗೆ ಆಗಮಿಸಿದ್ದು, ಇನ್ನೊಂದು ತಂಡ ಉಡುಪಿ ಜಿಲ್ಲೆಯಲ್ಲಿ ಕಾರ್ಯಾಚರಣೆ ನಡೆಸುತ್ತಿದೆ.
ಇನ್ನು ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ತುರ್ತು ಸಭೆ ನಡೆಸಿರುವ ಸಚಿವ ಯು.ಟಿ. ಖಾದರ್, ಎಲ್ಲ ಅಧಿಕಾರಿಗಳು ಜಾಗೃತರಾಗಿರುವಂತೆ ಕಟ್ಟೆಚ್ಚರ ವಹಿಸಲು ಸೂಚನೆ ನೀಡಿದ್ದು, ಇದೇ 11ರವರೆಗೆ ಪ್ರತಿದಿನ ಭಾರೀ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿರುವುದರಿಂದ ಇಲಾಖೆ ಎಲ್ಲಾ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
(Photo Courtesy: Prakash Ammannaya)
Discussion about this post