No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
  • Advertise With Us
  • Grievances
  • About Us
  • Contact Us
Wednesday, September 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಾನವ ಕಳ್ಳಸಾಗಾಣಿಕೆ ತಡೆಗೆ ಇಲಾಖೆಗಳ ಸಮನ್ವಯ ಅಗತ್ಯ: ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ

kalpa News by kalpa News
July 30, 2026
in ಶಿವಮೊಗ್ಗ
0
Coordination is essential for prevent human trafficking: DC
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ಮಾನವ ಕಳ್ಳಸಾಗಾಣಿಕೆಯು ಕಣ್ಣಿಗೆ ನೇರವಾಗಿ ಗೋಚರಿಸದಿದ್ದರೂ ಸಮಾಜದ ಮೇಲೆ ಅತ್ಯಂತ ಕೆಟ್ಟ ಪರಿಣಾಮ ಬೀರುವ ಸಂಘಟಿತ ಅಪರಾಧವಾಗಿದ್ದು, ಸರ್ಕಾರದ ಮಾರ್ಗಸೂಚಿಯನ್ನು ಮೀರಿ ಇದನ್ನು ತಡೆಗಟ್ಟಲು ಸಕ್ರಿಯವಾಗಿ ಎಲ್ಲ ಅಧಿಕಾರಿಗಳು ತೊಡಗಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಕರೆ ನೀಡಿದರು.

ನಗರದ ಡಿಎಆರ್ ಪೊಲೀಸ್ ಸಭಾ ಭವನದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿವಮೊಗ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ “ಮಾನವ ಕಳ್ಳಸಾಗಾಣಿಕೆ ತಡೆ ದಿನಾಚರಣೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
Kumadvathi College Shikariuraಮೊದಲೆಲ್ಲ ಮಾನವ ಕಳ್ಳಸಾಗಾಣಿಕೆ ಎಂದರೆ ಬಾಲ ಕಾರ್ಮಿಕತೆ, ಜೀತ ಪದ್ದತಿ, ಭಿಕ್ಷಾಟನೆ ಕಣ್ಣ ಮುಂದೆ ಬರುತ್ತಿತ್ತು. ಈಗ ಇದು ಬಹು ಆಯಾಮಗಳುಳ್ಳ ಸಂಘಟಿತ ಅಪರಾಧವಾಗುತ್ತಿದೆ. ಮಕ್ಕಳಲ್ಲಿನ ಅತಿಯಾದ ಮೊಬೈಲ್ ಅವಲಂಬನೆ, ಸಾಮಾಜಿಕ ಜಾಲತಾಣಗಳ ಮೂಲಕ ಇತರರ ಹಿಡಿತಕ್ಕೆ ಒಳಗಾಗಿ ತಂದೆ ತಾಯಿಗೆ ಗೊತ್ತಾಗದಂತೆ ಮನೆಯಿಂದ ಓಡಿ ಹೋಗುವ ಪ್ರಕರಣಗಳೂ ಈ ಜಾಲಕ್ಕೆ ತುತ್ತಾಗುವ ಸಾಧ್ಯತೆ ಹೆಚ್ಚಿದೆ.

ಮಹಿಳೆಯರು ಮತ್ತು ಮಕ್ಕಳ ದೈಹಿಕ ಶೋಷಣೆ, ಬಲವಂತದ ದುಡಿಮೆ, ಲೈಂಗಿಕ ಶೋಷಣೆ ಹಾಗೂ ಬಾಲ ಕಾರ್ಮಿಕತೆ, ಜೀತ, ಭಿಕ್ಷಾಟನೆಯಲ್ಲಿ ತೊಡಗಿಸುವಂತಹ ಕೃತ್ಯಗಳು ಮಾನವ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದ್ದು, ಇವುಗಳನ್ನು ತಡೆಯಲು ಎಲ್ಲಾ ಇಲಾಖೆಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಮುಖ್ಯವಾಗಿ ಜಾಗೃತಿ ಮೂಡಿಸುವುದು ಮತ್ತು ರಕ್ಷಣೆಗೆ ಆದ್ಯತೆ ನೀಡಬೇಕು ಎಂದರು.
ಬಾಲಕಾರ್ಮಿಕತೆ, ಜೀತ ಪದ್ಧತಿ, ವಲಸೆ ಕಾರ್ಮಿಕರ ಶೋಷಣೆ, ಭಿಕ್ಷಾಟನೆ, ವೇಶ್ಯಾವಾಟಿಕೆ, ಮಕ್ಕಳ ಲೈಂಗಿಕ ದೌರ್ಜನ್ಯ, ಬಲವಂತದ ಬಾಲ್ಯವಿವಾಹ, ದುರುಪಯೋಗಪಡಿಸಿಕೊಳ್ಳುವ ದತ್ತು ಸ್ವೀಕಾರ ಹಾಗೂ ಡ್ರಗ್ ಪೆಡ್ಲಿಂಗ್‌ಗಳು ಸಮಾಜಕ್ಕೆ ಶಾಪವಾಗಿದ್ದು ಇದನ್ನು ತೊಡೆದು ಹಾಕಲು ದೇಶದಲ್ಲೇ ಪ್ರಥಮವಾಗಿ ಕರ್ನಾಟಕ ಸರ್ಕಾರವು ‘ಕ್ರಮಬದ್ಧ ಕಾರ್ಯವಿಧಾನ ಮಾರ್ಗಸೂಚಿ ಪುಸ್ತಕ’ವನ್ನು ಹೊರತಂದಿದೆ. ಅಧಿಕಾರಿಗಳು ಕೇವಲ ಮಾರ್ಗಸೂಚಿಗೆ ಸೀಮಿತವಾಗದೆ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ಸಂತ್ರಸ್ತರನ್ನು ರಕ್ಷಿಸುವುದು, ಅವರಿಗೆ ಪುನರ್ವಸತಿ ಕಲ್ಪಿಸುವುದು ಮತ್ತು ಆರೋಪಿಗಳಿಗೆ ತಕ್ಕ ಶಿಕ್ಷೆ ಕೊಡಿಸುವುದು ಅತ್ಯಗತ್ಯ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
JNNCE Shivamoggaಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸಂತೋಷ್ ಎಂ.ಎಸ್. ಮಾತನಾಡಿ ರಾಷ್ಟ್ರ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುವ ಮಹಿಳೆಯರು ಮತ್ತು ಮಕ್ಕಳು ಮಾನವ ಕಳ್ಳ ಸಾಗಾಣಿಕೆಗೆ ಬಲಿಯಾಗುತ್ತಿರುವುದು ವಿಷಾಧನೀಯ. ಇದನ್ನು ತಡೆಗಟ್ಟಲು ನಾವೆಲ್ಲರೂ ಶ್ರಮಿಸಬೇಕು. ಮಾರ್ಗಸೂಚಿನಗಳಾಚೆ ಕಾರ್ಯ ಕೈಗೊಳ್ಳಬೇಕು.

Also read>> ವಾಸ್ಕೋ ಡ ಗಾಮ–ವೇಲಂಕಣ್ಣಿ ನಡುವೆ 3 ವಿಶೇಷ ರೈಲು | ಉತ್ತರ ಕರ್ನಾಟಕಕ್ಕೂ ಉಪಯೋಗ

ಅಪರಾಧ ನಡೆದಾಗ ತನಿಖೆ, ಸಾಕ್ಷ್ಯ ಸಂಗ್ರಹ, ನೊಂದವರಿಗೆ ಆಪ್ತ ಸಮಾಲೋಚನೆ ಹಾಗೂ ಸೂಕ್ತ ಪರಿಹಾರ ಒದಗಿಸುವ ಪ್ರಕ್ರಿಯೆಗಳು ಸಮರ್ಪಕವಾಗಿ ನಡೆದಾಗ ಮಾತ್ರ ನ್ಯಾಯ ಸಿಗಲು ಸಾಧ್ಯವಾಗುತ್ತದೆ. ಆದ್ದರಿಂದ ಮಾನವ ಕಳ್ಳ ಸಾಗಾಣಿಕೆ ತಡೆಗಟ್ಟುವ ಬಗ್ಗೆ ವ್ಯಾಪಕ ಅರಿವು ಮೂಡಿಸುವುದು, ನ್ಯಾಯ ಪ್ರಕ್ರಿಯೆ, ಆಪ್ತಸಮಾಲೋಚನೆ ಮತ್ತು ಪುನರ್ವಸತಿಗೆ ಹೆಚ್ಚಿನ ಒತ್ತು ನೀಡಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಬಿ. ಅವರು ಭಾಗವಹಿಸಿ ಪ್ರತಿಜ್ಞಾವಿಧಿ ಬೋಧಿಸಿದರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಸ್. ನಟರಾಜ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಲ್ಲೇಶಪ್ಪ ಡಿ. ಹಾಗೂ ಜಿಲ್ಲಾ ಕಾರ್ಮಿಕ ಅಧಿಕಾರಿ ವೇಣುಗೋಪಾಲ್ ಎಂ.ಪಿ. ಉಪಸ್ಥಿತರಿದ್ದರು.

ನಾಗರೀಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಆರಕ್ಷಕ ಉಪ ನಿರೀಕ್ಷಕ ಸಿದ್ಧರಾಮಪ್ಪ ಕೆ. ಮತ್ತು ಹೆಡ್ ಕಾನ್ಸ್ಟೇಬಲ್ ಮಂಜುನಾಥ ಪಾಟೀಲ್ ಅವರು ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಭಾರತಿ ಬಣಕಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರೂಪಣಾಧಿಕಾರಿ ಕವಿತ ಕಾರ್ಯಕ್ರಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಅಧಿಕಾರಿ ಶಶಿರೇಖಾ ಮತ್ತು ಇತರೆ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalpa News Advertising DisclaimerKalahamsa Infotech private limited

Tags: DC Prabhulinga Kavalikattihuman traffickingKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ವಾಸ್ಕೋ ಡ ಗಾಮ–ವೇಲಂಕಣ್ಣಿ ನಡುವೆ 3 ವಿಶೇಷ ರೈಲು | ಉತ್ತರ ಕರ್ನಾಟಕಕ್ಕೂ ಉಪಯೋಗ

Next Post

ಮೈಸೂರು | ಆ.2 ರಂದು ಟಿ.ಕೆ. ಬಡಾವಣೆ ರಾಯರ ಮಠದ ರಜತ ಮಹೋತ್ಸವ ಸಂಭ್ರಮ

kalpa News

kalpa News

Next Post
Mysuru Rayara Mutt Silver Jubilee Celebration on Aug 2

ಮೈಸೂರು | ಆ.2 ರಂದು ಟಿ.ಕೆ. ಬಡಾವಣೆ ರಾಯರ ಮಠದ ರಜತ ಮಹೋತ್ಸವ ಸಂಭ್ರಮ

Leave a Reply Cancel reply

Your email address will not be published. Required fields are marked *

No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL