ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚಳ್ಳಕೆರೆ: ಲಾಕ್ ಡೌನ್ ತೆರವಿನ ನಂತರ ಕೊರೋನಾ ಹರಡುತ್ತಿರುವುದು ಹೆಚ್ಚಾಗುತ್ತಿದೆ. ಕೋವಿಡ್ ಹರವುದನ್ನು ತಡೆಗಟ್ಟಲು ಸರ್ಕಾರವು ಸಾಕಷ್ಟು ಪ್ರಯತ್ನಿಸುತ್ತಿದ್ದೆ. ಎಲ್ಲಾರು ಜಾಗೃತಿಯಿಂದ ಇದ್ದಾಗ ಮಾತ್ರ ಸಂಪೂರ್ಣ ಹತೋಟಿಗೆ ಸಾಧ್ಯವಾಗುತ್ತದೆ ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು.
ತಾಲೂಕು ಪಂಚಾಯಿತಿ ಸಭಾಗಂಣದಲ್ಲಿ ಶನಿವಾರ ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಪಂಚಾಯಿತಿ, ತಾಲೂಕು ಆಡಳಿತ,ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಾಗೂ ನಗರಸಭೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕೋವಿಡ್ 19 ರ ಬಗ್ಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಲಾಕ್ ಡೌನ್ ತೆರವಿನ ನಂತರ ಕೋರೋನಾ ಹರಡುವುದು ಹೆಚ್ಚಾಗುತ್ತಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಹೊರಗಿನಿಂದ ಬಂದವರಿಗೆ ಮಾತ್ರ ಪಾಸಿಟಿವ್ ಕಾಣಿಸಿಕೊಂಡಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಕೊರೋನಾ ಸಮುದಾಯಕ್ಕೆ ಹರಡುತ್ತಿದ್ದು ಇನ್ನಾದರು ಜನ ಎಚ್ಚೆತ್ತುಕೊಳ್ಳದಿದ್ದರೆ ಅಪಾಯ ತಪ್ಪಿದ್ದಲ್ಲ. ಅಧಿಕಾರಿಗಳು, ವೈದ್ಯರು, ಪೋಲೀಸ್ ಇಲಾಖೆ ಅರೋಗ್ಯ ಸಹಾಯಕಿಯರು ಕೊರೋನಾವನ್ನು ಹತೋಟಿಗೆ ತರುವ ಉದ್ದೇಶದಿಂದ ಕೋವಿಡ್ 19 ರ ಕಾರ್ಯಾಗಾರವನ್ನು ಜಿಲ್ಲಾಡಳಿತ ಇಂದು ತರಬೇತಿ ಕಾರ್ಯಗಾರವನ್ನು ಹಮ್ಮಿಕೊಂಡಿದೆ. ಗ್ರಾಮೀಣ ಪ್ರದೇಶದಲ್ಲಿ ಕೆಲಸವಿಲ್ಲದೆ ಪರಿತಪ್ಪಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ರಾಷ್ಟೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಬಡವರಿಗೆ ಕೂಲಿ ಕೆಲಸ ನೀಡುವುದರಿಂದ ಸಹಕಾರಿಯಾಗುತ್ತದೆ ಎಂದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು ಮಾತನಾಡಿ, ಚಿತ್ರದುರ್ಗ ಗೀನ್ ವಲಯದಲ್ಲಿತ್ತು. ಇತ್ತೀಚಿನ ದಿನಗಳಲ್ಲಿ ಇಲ್ಲಿಯೂ ಸಹ ಕೋರೋನಾ ಹರಡುತ್ತಿದ್ದು, ಕೊರೋನಾದಿಂದ ನಾವು ಹಿಂದಿನ ಸಂಸ್ಕೃತಿಯನ್ನು ಕಲಿಯಬೇಕಾಗುತ್ತದೆ. ಹೊರಗೆ ಹೋಗಿ ಮನೆಗೆ ಬಂದಾಗ ಬಾಗಿಲಿನಲ್ಲಿ ಕೈ ಕಾಲು ತೊಳೆದು ಒಳಗೆ ಹೋಗಬೇಕು, ನಾವು ಕೆಲಸವಿಲ್ಲದೆ ಹೊರಗೆ ಹೋಗಬಾರದು, ಹೊರಗೆ ಹೋಗುವಾಗ ತಪ್ಪದೆ ಮಾಸ್ಕ್ ಧರಿಸಬೇಕು, ಸ್ಯಾನಿಟರನ್ನು ಕೈಗಳಿಗೆ ಸಿಂಪಡಿಸಿಕೊಳ್ಳಬೇಕು, ಜ್ವರ ಮತ್ತು ಕೆಮ್ಮು ಕಾಣಿಸಿಕೊಂಡರೆ ತತಕ್ಷಣವೇ ವೈದ್ಯರಲ್ಲಿ ಪರೀಕ್ಷಿಸಿಕೊಳ್ಳಬೇಕು, ಒಬ್ಬರಿಂದ ಒಬ್ಬರಿಗೆ ಹರಡುವುದಕ್ಕೆ ಬಿಡಬಾರದು ಎಂದರು.
ಜಿಲ್ಲಾ ಆರೋಗ್ಯ ಅಧಿಕಾರಿ ಪಾಲಾಕ್ಷಯ್ಯ ಮಾತನಾಡಿ, ಚಿತ್ರದುರ್ಗ ಜಿಲ್ಲೆಯಲ್ಲಿ ಒಟ್ಟು 1467 ಜನರ ಗಂಟಲು ದ್ರವ ಮತ್ತು ರಕ್ತ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಇವರಲ್ಲಿ 49 ಮಂದಿಗೆ ಕೊರೋನಾ ಪಾಸಿಟಿವ್ ಇರುವುದು ಪತ್ತೆಯಾಗಿದೆ. 49 ಮಂದಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಇವರಲ್ಲಿ 43 ಮಂದಿ ಕೊರೋನಾದಿಂದ ಮುಕ್ತಿ ಹೊಂದಿ ಆಸ್ಪತ್ರೆಯಿಂದ ಕಳುಹಿಸಲಾಗಿತ್ತು. ಉಳಿದ ಆರು ಮಂದಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರತಿಯೊಬ್ಬರು ಜಾಗೃತಿಯಿಂದ ಇದ್ದರೆ ಕೊರೋನಾ ಹರಡುವುದಿಲ್ಲ. ಹಲವು ನಿಯಮಗಳನ್ನು ತಪ್ಪದೇ ಎಲ್ಲರೂ ಪಾಲಿಸಬೇಕು. ಮುಖಕ್ಕೆ ಮಾಸ್ಕ್ ಧರಿಸಬೇಕು, ಒಬ್ಬರಿಂದ ಒಬ್ಬರು ಸಾಮಾಜಿಕ ಅಂತರ ಕಾಪಾಡಬೇಕು, ಪದೇ ಪದೇ ಕಣ್ಣು, ಮೂಗು, ಬಾಯಿ ಮುಟ್ಟಿಕೊಳ್ಳಬಾರದು, ಪ್ರತಿ ಗಂಟೆಗೊಮ್ಮೆ ಸೋಪಿನಿಂದ ಕೈ ತೊಳೆದುಕೊಳ್ಳಬೇಕು ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಯೋಗೇಶ್ ಮಾತನಾಡಿ, ಕೊರೋನಾ ಒಬ್ಬರಿಂದ ಒಬ್ಬರಿಗೆ ಹರಡುವುದರಿಂದ ಮುಖ್ಯವಾಗಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು, ಹೆಚ್ಚಿನ ಜಾಗ್ರತೆಯಿಂದ ಇರಬೇಕು. ಪಂಚಾಯಿತಿ ವ್ಯಾಪ್ತಿಗಳಲ್ಲಿ ಕೂಲಿ ಕಾರ್ಮಿಕರಿಗೆ ಕೆಲಸ ನೀಡಲಾಗುವುದು ಎಂದರು.
ಈ ಕಾರ್ಯಾಗಾರದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ಪಿ. ಪ್ರಕಾಶ್ ಮೂರ್ತಿ, ತಾಲೂಕು ಪಂಚಾಯಿತಿ ಅಧ್ಯಕ್ಷೆ ವಿಜಯಲಕ್ಷ್ಮಿ, ಉಪಾಧ್ಯಕ್ಷೆ ತಿಪ್ಪಮ್ಮ, ಸ್ಥಾಯಿ ಸಮಿತಿ ಅಧ್ಯಕ್ಷ ಆಂಜನೇಯ, ಇಓ ಶ್ರೀಧರ್ ಬಾರುಕೇರ್, ತಹಶೀಲ್ದಾರ್ ಎಂ. ಮಲ್ಲಿಕಾರ್ಜುನ್, ಟಿಎಚ್‌ಓ ಪ್ರೇಮಸುಧ, ಡಿವೈಎಸ್‌ಪಿ ಶ್ರೀಧರ್, ತುಳಸಿ ರಂಗನಾಥ, ವೃತ್ತ ನಿರೀಕ್ಷಕ ಈ ಆನಂದ್ ಪೌರಾಯುಕ್ತ ಪಾಲಯ್ಯ, ತಾಲೂಕು ಪಂಚಾಯಿತಿ ಸದಸ್ಯರು, ನಗರಸಭೆ ಸದಸ್ಯರು ತಾಲೂಕು ಅಧಿಕಾರಿಗಳು ಖಾಸಗಿ ವೈದ್ಯರು, ಸರ್ಕಾರಿ ವೈದ್ಯರುಗಳು ಇದ್ದರು.
(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)
Get In Touch With Us info@kalpa.news Whatsapp: 9481252093















