ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದಲ್ಲಿ ಮತ್ತೆ ಕೊರೋನಾ #CoronaPositive ಸಕ್ರಿಯ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಎಚ್ಚೆತ್ತುಕೊಂಡು ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ.
ಈ ಕುರಿತಂತೆ, ರಾಜ್ಯದ ಶಾಲೆಗಳಿಗೆ #School ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಇವುಗಳನ್ನು ಪಾಲಿಸುವಂತೆ ಆದೇಶಿಸಿದೆ.
Also Read>> ಶಿವಮೊಗ್ಗ | ದೈಹಿಕ, ಮಾನಸಿಕ ಆರೋಗ್ಯದೊಂದಿಗೆ ಸಕಾರಾತ್ಮಕ ಚಿಂತನೆ ಮುಖ್ಯ | ಡಾ. ವೆಂಕಟೇಶ್
ರಾಜ್ಯದಲ್ಲಿ ಕೋವಿಡ್ ಕೇಸ್ ಗಣನೀಯವಾಗಿ ಏರಿಕೆ ಕಂಡಿದ್ದು, ರಾಜ್ಯದ ಒಟ್ಟು 234 ಸಕ್ರಿಯ ಪ್ರಕರಣಗಳಿದ್ದು, ಅದರಲ್ಲಿ ಬೆಂಗಳೂರು #Bengaluru ಒಂದರಲ್ಲೇ ಬರೋಬ್ಬರಿ 150ಕ್ಕೂ ಹೆಚ್ಚು ದಾಖಲಾಗಿದೆ.
ಬೆಂಗಳೂರು ಮತ್ತೆ ಕೊರೋನಾ ಹಾಟ್ ಸ್ಪಾಟ್ ಆಗುತ್ತಿದೆ. ಕೋವಿಡ್ ನಿಯಂತ್ರಣ ಜೊತೆಗೆ ಡೆಂಗ್ಯೂ ಕಾಪಾಡಿಕೊಳ್ಳೋದು ಸವಾಲಾಗಿದೆ. ಮಳೆಗಾಲ ಆಗಿರುವುದರಿಂದ ಬಿಬಿಎಂಪಿ ಆರೋಗ್ಯ ವಿಭಾಗ ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುತ್ತಿದೆ.
ಶಾಲೆಗಳಿಗೆ ಹೊಸ ಮಾರ್ಗಸೂಚಿಯಲ್ಲಿ ಏನಿದೆ?
- ಶಾಲೆಗೆ ಬಂದ ನಂತರ ಮಕ್ಕಳಲ್ಲಿ ಜ್ವರ ಶೀತ ಗುಣಲಕ್ಷಣಗಳು ಕಂಡುಬಂದರೆ ತಕ್ಷಣ ಪೋಷಕರ ಗಮನಕ್ಕೆ ತಂದು ಮನೆಗೆ ಕಳುಹಿಸಬೇಕು
- ಶಾಲಾ ಶಿಕ್ಷಕರಿಗೆ ಸಿಬ್ಬಂದಿಗೆ ಜ್ವರ, ಶೀತದಂತಹ ಲಕ್ಷಣ ಕಂಡುಬಂದರೆ ಸೂಕ್ತ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕ
- ಮಕ್ಕಳಿಗೆ ನೆಗಡಿ, ಜ್ವರ, ಕೆಮ್ಮು ಇದ್ದರೆ ಶಾಲೆಗೆ ಕಳುಹಿಸದೇ ವೈದ್ಯರ ಸಲಹೆ ಪಡೆದುಕೊಂಡು ಸೂಕ್ತ ಚಿಕಿತ್ಸೆ, ಆರೈಕೆ ನೀಡಬೇಕು
- ಜ್ವರ ಸಂಪೂರ್ಣ ಗುಣಮುಖವಾದ ಬಳಿಕ ಮಕ್ಕಳನ್ನು ಶಾಲೆಗೆ ಕಳಿಸಬೇಕು
- ಸ್ಯಾನಿಟೈಸ್ ಬಳಕೆ, ಕೈಗಳ ಸ್ವಚ್ಛತೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳೋದು ಸೇರಿದಂತೆ ಕೊರೋನಾ ಮುನ್ನೆಚ್ಚರಿಕಾ ಕ್ರಮಗಳನ್ನು ಶಾಲೆಯಲ್ಲಿ ಪಾಲಿಸಬೇಕು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 





















