ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ರಾಜ್ಯದಾದ್ಯಂತ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ 9 ದಿನಗಳ ಕಾಲ ರಾಜ್ಯದಾದ್ಯಂತ ಜನತಾ ಕರ್ಫ್ಯೂ ಹೇರುವ ಸಾಧ್ಯತೆಯಿದೆ.
ಈ ಕುರಿತಂತೆ ಮಾತನಾಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೋವಿಡ್-19 ತಡೆಗೆ ಖಾಸಗಿ ಆಸ್ಪತ್ರೆಗಳ ಸಹಭಾಗಿತ್ವ ಪಡೆಯಲಾಗುವುದು. ಬೆಂಗಳೂರಿನಲ್ಲಿ ಜನತೆ ಲಾಕ್ ಡೌನ್ ಇದ್ದರೂ ತಲೆಕೆಡಸಿಕೊಂಡಿಲ್ಲ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇಂದು ಸಂಜೆ ತುರ್ತುಸಭೆ ಕರೆಯಲಾಗಿದ್ದು, ಅಧಿಕಾರಿಗಳು ಹಾಗೂ ವೈದ್ಯಕೀಯ ತಜ್ಞರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನಕ್ಕೆ ಬರಲಾಗುತ್ತದೆ. ಸಂಜೆಯೊಳಗೆ ತಿಳಿಸುತ್ತೇವೆ ಎಂದಿದ್ದಾರೆ.
Get in Touch With Us info@kalpa.news Whatsapp: 9481252093

















