ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಅವರ ಗನ್’ಮ್ಯಾನ್ ಸೇರಿದಂತೆ ಅವರ ನಾಲ್ವರು ಆಪ್ತರಿಗೆ ಕೊರೋನಾ ಪಾಸಿಟಿವ್ ಎಂದು ವರದಿಯಾಗಿದೆ.
ಈ ಕುರಿತಂತೆ ಸ್ವತಃ ದಿನೇಶ್ ಪತ್ನಿ ಟಬು ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ನಮ್ಮ ಆಪ್ತಸಹಾಯಕ, ಗನ್’ಮ್ಯಾನ್ ಸೇರಿದಂತೆ ಇಬ್ಬರು ಸಿಬ್ಬಂದಿಗಳಲ್ಲಿ ಕೊರೋನಾ ವೈರಸ್ ಪತ್ತೆಯಾಗಿದೆ. ನಾವೂ ಕೂಡ ಪರೀಕ್ಷೆಗೊಳಗಾಗಿದ್ದು, ಅದೃಷ್ಟವಶಾತ್ ನಮಗಾರಿಗೂ ವೈರಸ್ ದೃಢಪಟ್ಟಿಲ್ಲ ಎಂದಿದ್ದಾರೆ.
ಈ ಹಿನ್ನೆಲೆಯಲ್ಲಿ ನಾವೆಲ್ಲರೂ 14 ದಿನಗಳ ಕಾಲ ಕ್ವಾರಂಟೈನ್’ನಲ್ಲಿದ್ದೇವೆ. ಶೀಘ್ರ ಇದರಿಂದ ಹೊರಬರುವ ವಿಶ್ವಾಸವಿದೆ ಎಂದಿದ್ದಾರೆ.
Get In Touch With Us info@kalpa.news Whatsapp: 9481252093
Discussion about this post