ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಮಂಡ್ಯ ಸಂಸದ ಸುಮಲತಾ ಅಂಬರೀಶ್ ಅವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಈ ವಿಚಾರವನ್ನು ಅವರೇ ಸ್ವತಃ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ.
ಈ ಕುರಿತಂತೆ ತಮ್ಮ ಫೇಸ್’ಬುಕ್’ನಲ್ಲಿ ಬರೆದುಕೊಂಡಿರುವ ಅವರು, ಶನಿವಾರ, ಜುಲೈ 4ರಂದು, ನನಗೆ ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೋನಾ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟಿದ್ದರಿಂದ, ಕೋವಿಡ್ 19 ಪರೀಕ್ಷೆಗೆ ಒಳಗಾದೆ. ಇವತ್ತು ಪಾಸಿಟಿವ್ ಎಂದು ಫಲಿತಾಂಶ ಬಂದಿದೆ. ಹಾಗಾಗಿ ವೈದ್ಯರ ಸಲಹೆ ಪಡೆದುಕೊಂಡು ಅಗತ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ಮನೆಯಲ್ಲಿಯೇ ಕ್ವಾರಂಟೈನ್ ಗೆ ಒಳಪಟ್ಟಿದ್ದೀನಿ ಎಂದಿದ್ದಾರೆ.
ರೋಗ ನಿರೋಧಕ ಶಕ್ತಿಯು ನನ್ನಲ್ಲಿ ಪ್ರಬಲವಾಗಿದೆ ಮತ್ತು ನಿಮ್ಮ ಆಶೀರ್ವಾದ ನನ್ನ ಮೇಲೆ ಇರುವುದರಿಂದ ಬೇಗ ಗುಣಮುಖ ಆಗುತ್ತೇನೆ. ಈಗಾಗಲೇ ನನ್ನನ್ನು ಭೇಟಿಯಾದ ವ್ಯಕ್ತಿಗಳ ವಿವರವನ್ನು ಸರಕಾರಿ ಅಧಿಕಾರಿಗಳಿಗೆ ಕೊಟ್ಟಿರುವೆ. ಆದರೂ ನನ್ನನ್ನು ಭೇಟಿಯಾದವರಲ್ಲಿ ಯಾರಿಗಾದರೂ ಕೋವಿದ್ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಪರೀಕ್ಷೆ ಮಾಡಿಸಲು ವಿನಂತಿಸುತ್ತೇನೆ. ನಿಮ್ಮ ಹಾರೈಕೆ ಇರಲಿ ಎಂದಿದ್ದಾರೆ.
Get In Touch With Us info@kalpa.news Whatsapp: 9481252093
Discussion about this post