ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ |
ಕುವೆಂಪು ವಿಶ್ವವಿದ್ಯಾಲಯದ ಗ್ರಂಥಾಲಯ ಹಾಗೂ ಹಾಸ್ಟೆಲ್’ನ ಕೆಲವು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳಿಗೆ ಐದು ದಿನ ರಜೆ ಘೋಷಿಸಲಾಗಿದೆ.
ಈ ಕುರಿತಂತೆ ವಿವಿಧ ಅಧಿಕೃತ ಮಾಹಿತಿ ಪ್ರಕಟಿಸಿದ್ದು, ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಜ.17ರಿಂದ 21ರವರೆಗೂ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ ಎಂದು ತಿಳಿಸಲಾಗಿದೆ.ಇದೇ ವೇಳೆ ಸ್ನಾತಕೋತ್ತರ ಪ್ರಥಮ ಹಾಗೂ ತೃತೀಯ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿರುವ ಹಿನ್ನೆಲೆಯಲ್ಲಿ ಬೋಧಕ ಸಿಬ್ಬಂದಿಗಳು ಆನ್’ಲೈನ್ ತರಗತಿಗಳನ್ನು ನಡೆಸಲು ಸೂಚಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post