ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಕೃಷಿ ಸಚಿವ ಬಿ.ಸಿ. ಪಾಟೀಲ್ ಸೇರಿದಂತೆ ಅವರ ಕುಟುಂಬದ ಎಲ್ಲರಿಗೂ ಸಹ ಕೊರೋನಾ ಪಾಸಿಟಿವ್ ಬಂದಿದ್ದು, ಇಲ್ಲರೂ ಹೋಂ ಕ್ವಾರಂಟೈನ್ ಆಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಕುರಿತಂತೆ ಸ್ವತಃ ಟ್ವೀಟ್ ಮಾಡಿರುವ ಸಚಿವರು, ಇದೀಗ ಬಂದ ವರದಿಯ ಪ್ರಕಾರ ನನಗೆ ಕೊರೋನಾ ಪಾಸಿಟಿವ್ ಎಂದು ದೃಢಪಟ್ಟಿದೆ. ಬೆಂಗಳೂರಿನ ನನ್ನ ನಿವಾಸದಲ್ಲಿ ಹೋಂ ಕ್ವಾರಂಟೈನ್ ಆಗುತ್ತಿದ್ದೇನೆ. ಅಲ್ಲದೇ ಇತ್ತೀಚೆಗೆ ನನ್ನನ್ನು ಹಿರೇಕೆರೂರು ಹಾಗೂ ಕೊಪ್ಪಳ ಭಾಗದಲ್ಲಿ ಭೇಟಿಯಾದ ಪ್ರಥಮ ಮತ್ತು ದ್ವಿತೀಯ ಸಂಪರ್ಕಿತರು, ಯಾರಿಗಾದರೂ ಕೋವಿಡ್ ಲಕ್ಷಣ ಕಂಡುಬಂದಲ್ಲಿ ಕೂಡಲೇ ಪರೀಕ್ಷೆಗೆ ಒಳಗಾಗಿ. ಯಾರೂ ಆತಂಕ ಪಡುವ ಅಗತ್ಯವಿಲ್ಲ, ಕೋವಿಡ್ ವಿರುದ್ಧ ಗೆಲ್ಲುವ ವಿಶ್ವಾಸವಿದೆ, ಜೊತೆಗೆ ನಿಮ್ಮೆಲ್ಲರ ಆಶೀರ್ವಾದ ಮತ್ತು ಹಾರೈಕೆ ಇರಲಿ ಎಂದಿದ್ದಾರೆ.
ಇದೀಗ ಬಂದ ವರದಿಯ ಪ್ರಕಾರ ನನಗೆ ಕೊರೋನಾ ಪಾಸಿಟಿವ್ ಎಂದು ದೃಢಪಟ್ಟಿದೆ. ಬೆಂಗಳೂರಿನ ನನ್ನ ನಿವಾಸದಲ್ಲಿ ಹೋಂ ಕ್ವಾರಂಟೈನ್ ಆಗುತ್ತಿದ್ದೇನೆ.
ಕೊಪ್ಪಳ ಜಿಲ್ಲೆಗೆ ಇತ್ತೀಚೆಗೆ ಭೇಟಿ ನೀಡಿದ ಸಂದರ್ಭದಲ್ಲಿ, ನನ್ನ ಜೊತೆ ಆಗಮಿಸಿದ ಐದು ಜನ ಸಿಬ್ಬಂದಿಗಳಿಗೂ ಕೊರೋನಾ ಪಾಸಿಟಿವ್ ಎಂದು ವರದಿ ಬಂದಿದೆ.
1/2— Kourava B.C.Patil (@bcpatilkourava) July 31, 2020
ಕೊಪ್ಪಳ ಜಿಲ್ಲೆಗೆ ಇತ್ತೀಚೆಗೆ ಭೇಟಿ ನೀಡಿದ ಸಂದರ್ಭದಲ್ಲಿ, ನನ್ನ ಜೊತೆ ಆಗಮಿಸಿದ ಐದು ಜನ ಸಿಬ್ಬಂದಿಗಳಿಗೂ ಕೊರೋನಾ ಪಾಸಿಟಿವ್ ಎಂದು ವರದಿ ಬಂದಿದೆ. ನನ್ನ ಶ್ರೀಮತಿ, ಅಳಿಯ ಹಾಗೂ ಹಿರೇಕೆರೂರಿನ ನಿವಾಸದ ಸಿಬ್ಬಂದಿ ವರ್ಗದವರು ಸೇರಿದಂತೆ ಒಟ್ಟು ಐವರಿಗೆ ಕೊರೋನಾ ಪಾಸಿಟಿವ್ ಎಂದು ದೃಢಪಟ್ಟಿದೆ. ಅವರನ್ನು ನಿರ್ದಿಷ್ಟವಾದ ಕೋವಿಡ್ ಕೇರ್ ಸೆಂಟರ್ ಗೆ ಸೇರಿಸಲಾಗಿದೆ. ಅವರೆಲ್ಲ ಬೇಗ ಗುಣಮುಖರಾಗಿ ಬರಲಿ ಎಂದು ಪ್ರಾರ್ಥಿಸುತ್ತೇನೆ. ನಿಮ್ಮೆಲ್ಲರ ಹಾರೈಕೆಯೂ ಇರಲಿ ಎಂದಿದ್ದಾರೆ.
Get In Touch With Us info@kalpa.news Whatsapp: 9481252093
Discussion about this post