ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಮುಂಬೈನಿಂದ ಆಗಮಿಸಿದ್ದ ವ್ಯಕ್ತಿಯೊಬ್ಬನಲ್ಲಿ ಕೊರೋನಾ ಪಾಸಿಟಿವ್ ಬಂದಿದ್ದು, ಈ ಮೂಲಕ ಜಿಲ್ಲೆಯಲ್ಲಿ ಈವರೆಗೂ 9 ಪ್ರಕರಣಗಳು ದಾಖಲಾಗಿವೆ.
ಈ ಕುರಿತಂತೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಪಾಸಿಟಿವ್ ಪ್ರಕರಣ ದಾಖಲಾಗಿರುವ ವ್ಯಕ್ತಿ ತಾಲೂಕಿನ ರಂಜದಕಟ್ಟೆ ನಿವಾಸಿ ಎಂದು ಹೇಳಲಾಗಿದೆ. ಈ ಕುರಿತಂತೆ ಬೆಂಗಳೂರಿನಿಂದಲೇ ಹೆಚ್ಚಿನ ಮಾಹಿತಿ ಪ್ರಕಟಿಸಲಿದ್ದಾರೆ ಎಂದರು.
ಕೊರೋನಾ ಪಾಸಿಟಿವ್ ಕಂಡುಬಂದ ವ್ಯಕ್ತಿಯು ಮುಂಬೈನಿಂದ ಬಂದಿರುವುದಾಗಿ ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದರು.
ತೀರ್ಥಹಳ್ಳಿಯ ಈ ಪ್ರಕರಣದೊಂದಿಗೆ ಜಿಲ್ಲೆಯಲ್ಲಿ ಈವರೆಗೂ ಒಟ್ಟು 9 ಪ್ರಕರಣ ದಾಖಲಾದಂತಾಗಿದೆ.
Get in Touch With Us info@kalpa.news Whatsapp: 9481252093
Discussion about this post