ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿಕಾರಿಪುರ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿವಾಸವಿರುವ ಮಳೇರಕೇರಿಯಲ್ಲಿ ವ್ಯಕ್ತಿಯೊಬ್ಬರಿಗೆ ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಈ ರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ.
ಈ ಕುರಿತಂತೆ ಮಾಹಿತಿ ನೀಡಿರುವ ಮುಖ್ಯಮಂತ್ರಿಗಳ ಆಪ್ತರೂ, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷರೂ ಆಗಿರುವ ಕೆ.ಎಸ್. ಗುರುಮೂರ್ತಿ, ಮುಖ್ಯಮಂತ್ರಿಗಳ ಗೃಹ ಕಚೇರಿಯ 100 ಮೀಟರ್ ದೂರದಲ್ಲಿರುವ ಮನೆಯೊಂದಕ್ಕೆ ರಾಜಾಸ್ಥಾನದಿಂದ ಆಗಮಿಸಿದ ವ್ಯಕ್ತಿಯೊಬ್ಬರಿಗೆ ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಈ ರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ ಎಂದರು.
ಈ ರಸ್ತೆ ಸೀಲ್ ಡೌನ್ ಆಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಇಲ್ಲಿನ ಗೃಹ ಕಚೇರಿಯನ್ನು ಮುಂಜಾಗ್ರತಾ ಕ್ರಮವಾಗಿ ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಸಾರ್ವಜನಿಕರು ಸಹಕರಿಸಬೇಕು. ಏನಾದರೂ ತುರ್ತು ಅಗತ್ಯವಿದ್ದರೆ ಮೊಬೈಲ್ ಮೂಲಕ ಸಂಪರ್ಕಿಸಿ ಎಂದು ಕೋರಿದ್ದಾರೆ.
Get In Touch With Us info@kalpa.news Whatsapp: 9481252093
Discussion about this post