ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ತಮ್ಮ ಗೃಹ ಕಚೇರಿ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸದ್ಯ ಹೋಂ ಕ್ವಾರಂಟೈನ್’ಗೆ ಒಳಗಾಗಿದ್ದಾರೆ.
ಈ ಕುರಿತಂತೆ ಸ್ವತಃ ಟ್ವೀಟ್ ಮಾಡಿರುವ ಮುಖ್ಯಮಂತ್ರಿಗಳು, ಗೃಹ ಕಚೇರಿ ಕೃಷ್ಣಾದಲ್ಲಿ ಕೆಲ ಸಿಬ್ಬಂದಿಗೆ ಕೋವಿಡ್ ಪಾಸಿಟಿವ್ ಬಂದಿರುವ ಕಾರಣ, ಇಂದಿನಿಂದ ಕೆಲ ದಿನಗಳ ಕಾಲ ಮನೆಯಿಂದಲೇ ಕರ್ತವ್ಯ ನಿರ್ವಹಿಸಲಿದ್ದೇನೆ. ವೀಡಿಯೋ ಕಾನ್ಫರೆನ್ಸ್ ಮೂಲಕ ಅಗತ್ಯ ಸಲಹೆ, ಸೂಚನೆಗಳನ್ನು ನೀಡಲಿದ್ದೇನೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಆರೋಗ್ಯವಾಗಿದ್ದೇನೆ. ಎಲ್ಲರೂ ಮುನ್ನೆಚ್ಚರಿಕೆ ಕ್ರಮಗಳು ಮತ್ತು ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿ. ವ್ಯಕ್ತಿಗತ ಅಂತರ ಕಾಪಾಡಿಕೊಳ್ಳುವುದು ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸುವ ಮೂಲಕ ಕೋವಿಡ್ ನಿಯಂತ್ರಣಕ್ಕೆ ಸಹಕರಿಸಿ ಎಂದು ಮನವಿ ಮಾಡಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಕೆಲ ಸಿಬ್ಬಂದಿಗೆ ಕೋವಿಡ್ ಪಾಸಿಟಿವ್ ಬಂದಿರುವ ಕಾರಣ, ಇಂದಿನಿಂದ ಕೆಲ ದಿನಗಳ ಕಾಲ ಮನೆಯಿಂದಲೇ ಕರ್ತವ್ಯ ನಿರ್ವಹಿಸಲಿದ್ದೇನೆ. ವೀಡಿಯೋ ಕಾನ್ಫರೆನ್ಸ್ ಮೂಲಕ ಅಗತ್ಯ ಸಲಹೆ, ಸೂಚನೆಗಳನ್ನು ನೀಡಲಿದ್ದೇನೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಆರೋಗ್ಯವಾಗಿದ್ದೇನೆ. 1/2
— CM of Karnataka (@CMofKarnataka) July 10, 2020
Get In Touch With Us info@kalpa.news Whatsapp: 9481252093
Discussion about this post