ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ದಿನದಿಂದ ದಿನಕ್ಕೆ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಇದೇ 27ರಿಂದ ನಡೆಯಬೇಕಿದ್ದ ಎಸ್’ಎಸ್’ಎಲ್’ಸಿ ಪರೀಕ್ಷೆಯನ್ನು ಮುಂದೂಡಲಾಗಿದೆ.
ಈ ಕುರಿತಂತೆ ಮಾತನಾಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸದ್ಯ ರಾಜ್ಯದಲ್ಲಿರುವ ಪರಿಸ್ಥಿತಿಯಲ್ಲಿ ಪರೀಕ್ಷೆಗಳನ್ನು ನಡೆಸುವುದು ಕಷ್ಟಕರವಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಮುಂದಿನ ದಿನಾಂಕವನ್ನು ಪರಿಸ್ಥಿತಿ ನೋಡಿಕೊಂಡು ನಿರ್ಧರಿಸಲಾಗುವುದು ಎಂದರು.
Get in Touch With Us info@kalpa.news Whatsapp: 9481252093
Discussion about this post