ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: ದೇಶದಾದ್ಯಂತ ಮೇ 31ರವರೆಗೂ ಲಾಕ್ ಡೌನ್ ವಿಸ್ತರಣೆ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು, ನಾಳೆಯಿಂದ ಹೊಸ ನಿಯಮಗಳು ಜಾರಿಗೆ ಬರಲಿದೆ.
ಏನಿರತ್ತೆ?
- ಕಂಟೈನ್ ಮೆಂಟ್ ವಲಯ ಹೊರತುಪಡಿಸಿದಂತೆ ಉಳಿದ ಕಡೆಗಳಲ್ಲಿ ಸಾರಿಗೆ ಸಂಚಾರಕ್ಕೆ ಅನುಮತಿ
- ಆಟೋ, ಟ್ಯಾಕ್ಸಿಗಳು ಕಾರ್ಯನಿರ್ವಹಿಸಬಹುದು
- ಕ್ರೀಡಾ ಕಾಂಪ್ಲೆಕ್ಸ್ ಗಳು, ಸ್ಟೇಡಿಯಂಗಳು ತೆರೆಯಬಹುದು, ಆದರೆ, ವೀಕ್ಷಕರಿಗೆ ಪ್ರವೇಶ ನೀಡುವಂತಿಲ್ಲ
Ministry of Home Affairs (MHA) issues guidelines on measures to be taken by Ministries/Departments of Government of India, State Governments/UT Governments & State/UT authorities for containment of COVID19. #LockDown4 will remain in effect till 31st May 2020. pic.twitter.com/10WnwnWfte
— ANI (@ANI) May 17, 2020
ಏನಿರಲ್ಲ?
- ದೇಶಿಯ ವೈದ್ಯಕೀಯ ಸೇವೆ
- ಏರ್ ಅಂಬ್ಯುಲೆನ್ಸ್ ಮತ್ತು ಸುರಕ್ಷತೆ ಉದ್ದೇಶ ಅಥವಾ ಗೃಹ ಸಚಿವಾಲಯದಿಂದ ಅನುಮತಿ ಪಡೆದಿರುವ ವಿಮಾನ ಪ್ರಯಾಣ ಹೊರತುಪಡಿಸಿದಂತೆ ಎಲ್ಲಾ ದೇಶಿಯ ಮತ್ತು ಅಂತಾರಾಷ್ಟ್ರೀಯ ವಿಮಾನ ಪ್ರಯಾಣ ಇಲ್ಲ
- ಎಲ್ಲಾ ಸಿನಿಮಾ ಹಾಲ್ ಗಳು, ಶಾಫಿಂಗ್ ಮಾಲ್ , ಜಿಮ್, ಈಜುಕೊಳ, ಮನೋರಂಜನಾ ಪಾರ್ಕ್ , ಬಾರ್ ಗಳು ಮತ್ತು ಸಭೆ ಸಮಾರಂಭಗಳನ್ನು ನಡೆಸುವಂತಿಲ್ಲ
- ಶಾಲಾ ಕಾಲೇಜು ಹಾಗೂ ಯಾವುದೇ ರೀತಿಯ ಶಿಕ್ಷಣ ಸಂಸ್ಥೆ ತೆರೆಯುವಂತಿಲ್ಲ
- ರಾತ್ರಿ 7ರಿಂದ ಬೆಳಿಗ್ಗೆ 7ರವರೆಗೂ ಜನರ ಓಡಾಟಕ್ಕೆ ಕಠಿಣ ನಿರ್ಬಂಧ
- ಹೊಟೇಲ್ ಗಳು, ರೆಸ್ಟೋರೆಂಟ್ ಸಹಿತ ಇತರೇ ಹಾಸ್ಪಿಟಾಲಿಟಿ ಸೇವೆಗಳಿಗೆ ನಿರ್ಬಂಧ ಮುಂದುವರಿಯಲಿದೆ. ಹೊಟೇಲ್ ಹಾಗೂ ರೆಸ್ಟೋರೆಂಟ್ ಗಳಲ್ಲಿ ಪಾರ್ಸೆಲ್ ಸೇವೆಗಳು, ಹೋಂ ಡೆಲಿವರಿಗೆ ಮಾತ್ರವೇ ಅವಕಾಶ.
- ಬೃಹತ್ ಸಾಮಾಜಿಕ, ರಾಜಕೀಯ, ಕ್ರೀಡಾ, ಮನೋರಂಜನಾ, ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳ ಮೇಲೆ ನಿರ್ಬಂಧ
- ಎಲ್ಲಾ ಧರ್ಮದವರ ಧಾರ್ಮಿಕ ಕೇಂದ್ರಗಳಲ್ಲಿ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ಹಾಗೂ ಎಲ್ಲಾ ರೀತಿಯ ಧಾರ್ಮಿಕ ಸಮಾರಂಭಗಳ ನಿರ್ಬಂಧ
Get in Touch With Us info@kalpa.news Whatsapp: 9481252093
Discussion about this post