ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: ಮಾರಕವಾಗಿ ಕಾಡುತ್ತಿರುವ ಕೊರೋನಾ ವೈರಸ್’ಗೆ ಔಷಧಿ ಅಥವಾ ವ್ಯಾಕ್ಸಿನೇಶನ್ ಕಂಡು ಹಿಡಿಯಲು ಕನಿಷ್ಠ ಒಂದೂವರೆಯಿಂದ ಎರಡು ವರ್ಷಗಳ ಕಾಲ ಅಗತ್ಯವಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.
ಈ ಕುರಿತಂತೆ ಹೇಳಿಕೆ ಬಿಡುಗಡೆ ಮಾಡಿರುವ ಇಲಾಖೆ, ಈ ವೈರಸ್’ಗೆ ನಿಗದಿತ ಔಷಧಿ ಸಂಶೋಧನೆ ಮಾಡುವುದು ಕಷ್ಟಸಾಧ್ಯವಿದೆ. ಹೀಗಾಗಿ, ಕನಿಷ್ಠ ಒಂದೂವರೆಯಿಂದ ಎರಡು ವರ್ಷಗಳ ಸಮಯವನ್ನು ಇದು ತೆಗೆದುಕೊಳ್ಳಲಿದೆ ಎಂದಿದೆ.
ಇನ್ನು, ವೈರಸ್’ನ್ನು ಎದುರಿಸಲು ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ವಿಚಾರದಲ್ಲಿ ವಿಶ್ವ ಆರೋಗ್ಯ ಸಂಸ್ಥೆಯೊಂದಿಗೆ ನಾವು ನಿರಂತರ ಸಂಪರ್ಕದಲ್ಲಿದ್ದೇವೆ. ಪ್ರಮುಖವಾಗಿ, ಈ ವೈರಸ್ ಹರಡದಂತೆ ತಡೆಗಟ್ಟಲು ಕೈಗೊಳ್ಳಬೇಕಾದ ಪರಿಣಾಮಕಾರಿಯಾದ ಕ್ರಮಗಳ ಬಗ್ಗೆ ಚರ್ಚಿಸುತ್ತಿದ್ದೇವೆ ಎಂದು ಹಿರಿಯ ಅಧಿಕಾರಿಗಳು ಹೇಳಿದ್ದಾರೆ.
ಈವರೆಗೂ ದೇಶದಾದ್ಯಂತ 73 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 1500 ಮಂದಿಯನ್ನು ವೀಕ್ಷಣೆಯಲ್ಲಿರಿಸಲಾಗಿದೆ. ಈವರೆಗೂ ದೇಶದಾದ್ಯಂತ 30 ವಿಮಾನ ನಿಲ್ದಾಣಗಳಲ್ಲಿ 10.5 ಲಕ್ಷಕ್ಕೂ ಅಧಿಕ ಪ್ರಯಾಣಿಕರನ್ನು ಆರೋಗ್ಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ತಿಳಿಸಲಾಗಿದೆ.
Get in Touch With Us info@kalpa.news Whatsapp: 9481252093
Discussion about this post