ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ರಾಜ್ಯಕ್ಕೆ ಮೆಕ್ಕಾದಿಂದ ಆಗಮಿಸಿದ ಗೌರಿಬಿದನೂರಿನ 32 ವರ್ಷದ ವ್ಯಕ್ತಿಯೋರ್ವರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 16ಕ್ಕೇರಿದೆ.
ಈ ಕುರಿತಂತೆ ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದು, ಗೌರಿಬಿದನೂರಿನ ಕೊರೋನಾ ಸೋಂಕಿತ ವ್ಯಕ್ತಿಯನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಪ್ರತ್ಯೇಕ ವಾರ್ಡ್’ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎಂದಿದ್ದಾರೆ.
ಚಿಕ್ಕಬಳ್ಳಾಪುರದ ಗೌರಿಬಿದನೂರಿನಲ್ಲಿ, ಮೆಕ್ಕಾ ಪ್ರವಾಸದಿಂದ ಹಿಂತಿರುಗಿದ್ದ 32 ವರ್ಷದ ವ್ಯಕ್ತಿಯೊಬ್ಬರಿಗೆ #Covid19 ಸೋಂಕು ದೃಡಪಟ್ಟಿದೆ. ಅವರನ್ನು ಈಗಾಗಲೇ ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ. ನಾಗರಿಕರು ಯಾವುದೇ ಆತಂಕಕ್ಕೆ ಒಳಗಾಗಬೇಡಿ.
— B Sriramulu (@sriramulubjp) March 21, 2020
ಈ ಮೂಲಕ ಕೊರೋನಾ ಪೀಡಿತರ ಸಂಖ್ಯೆ ರಾಜ್ಯದಲ್ಲಿ 16ಕ್ಕೇರಿದ್ದು, ಈ ಹಿಂದೆ 15 ಜನರಿಗೆ ಕರ್ನಾಟಕದಲ್ಲಿ ಕೊರೋನಾ ಸೋಂಕು ಇರುವುದು ಪತ್ತೆಯಾಗಿತ್ತು. ಅವರಲ್ಲಿ ಒಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
Get in Touch With Us info@kalpa.news Whatsapp: 9481252093
Discussion about this post