ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ವಿಶ್ವದಾದ್ಯಂತ ಸಾವಿರಾರು ಮಂದಿಯನ್ನು ಬಲಿ ಪಡೆದಿರುವ ಮಾರಕ ಕೊರೋನಾ ವೈರಸ್ ರಾಜ್ಯದಲ್ಲೂ ಸಹ ಹರಡಿರುವುದು ದೃಢಪಟ್ಟಿರುವ ಬೆನ್ನಲ್ಲೇ, ಕರುನಾಡಿನ ಮಮತಾಮಯಿ ಸುಧಾಮೂರ್ತಿ ನೆರವಿಗೆ ಮುಂದಾಗಿದ್ದಾರೆ.
ಹೌದು… ಈ ಕುರಿತಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಕರೆ ಮಾಡಿ ಮಾತನಾಡಿರುವ ಅವರು, ಕರ್ನಾಟಕದಲ್ಲಿ ಒಂದು ಆಸ್ಪತ್ರೆಯನ್ನು ತಮಗೆ ವಹಿಸಿದರೆ, ಅದನ್ನು ಕೊರೋನಾ ವೈರಸ್ ಚಿಕಿತ್ಸೆಗಾಗಿ ಇನ್ಫೋಸಿಸ್ ಫೌಂಡೇಶನ್’ನಿಂದ ಸಂಸ್ಥೆಯ ವೆಚ್ಚದಲ್ಲಿ ಪೂರ್ಣ ಪ್ರಮಾಣದಲ್ಲಿ ಸಜ್ಜುಗೊಳಿಸುವುದಾಗಿ, ಅಗತ್ಯ ಉಪಕರಣಗಳನ್ನು ಒದಗಿಸುವುದಾಗಿ ಹೇಳಿದ್ದಾರೆ.
ಈ ವಿಚಾರವನ್ನು ಸ್ವತಃ ಸಚಿವ ಸುರೇಶ್ ಕುಮಾರ್ ಫೇಸ್’ಬುಕ್’ನಲ್ಲಿ ಹಂಚಿಕೊಂಡಿದ್ದು, ಈ ತಾಯಿಯ ಹೃದಯವಂತಿಕೆಗೆ ನನ್ನ ಹೃದಯ ತುಂಬಿ ಬಂದಿತು ಎಂದು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.
Get in Touch With Us info@kalpa.news Whatsapp: 9481252093
Discussion about this post