ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಲೋಕಸಭಾ ಚುನಾವಣೆ #LoksabhaElection2024 ಹಿನ್ನೆಲೆಯಲ್ಲಿ ಫ್ರೀಡಂ ಪಾರ್ಕ್’ನಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ #PMNarendraModi ಅವರ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸಮಾವೇಶದ ಸ್ಥಳದಲ್ಲಿ ಜನರು ಕಿಕ್ಕಿರಿದು ತುಂಬಿದ್ದಾರೆ.
ವಿಶೇಷ ವಿಮಾನದ ಮೂಲಕ ಸೋಗಾನೆ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಧಾನಿಯವರು ಫ್ರೀಡಂ ಪಾರ್ಕ್ ವೇದಿಕೆಯಲ್ಲಿ ಲಕ್ಷಾಂತರ ಮಂದಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಫ್ರೀಡಂ ಪಾರ್ಕ್’ನಲ್ಲಿ ಈಗಾಗಲೇ ಬಿಜೆಪಿ ಕಾರ್ಯಕರ್ತರು, ಪಕ್ಷದ ಅಭಿಮಾನಿಗಳು ಹಾಗೂ ಸಾರ್ವಜನಿಕರು ಸಭಾಂಗಣದಲ್ಲಿ ಸೇರುತ್ತಿದ್ದಾರೆ.
ಎಲ್ಲ ವಿಭಾಗದಲ್ಲಿ ಬಗೆ ಬಗೆಯ ಎಂಟ್ರಿ ಅವಕಾಶ ನೀಡಲಾಗಿದೆ. ಒಳಬರಲು ಆರು ಬಾಗಿಲುಗಳನ್ನು ಮಾಡಲಾಗಿದೆ.
ಇನ್ನು, ಈಗಾಗಲೇ ವೇದಿಕೆಗೆ ಸಂಸದ ಬಿ.ವೈ. ರಾಘವೇಂದ್ರ #BYRaghavednra ಅವರು ಆಗಮಿಸಿದ್ದು ಮೊದಲ ಹಂತದಲ್ಲಿ ಕಾರ್ಯಕ್ರಮಕ್ಕೆ ಸರ್ವರನ್ನು ಆತ್ಮೀಯವಾಗಿ ಸ್ವಾಗತಿಸಿದ್ದಾರೆ.
ಕಾರ್ಯಕ್ರಮದಲ್ಲಿ ಶಿವಮೊಗ್ಗ, ದಾವಣಗೆರೆ, ಉಡುಪಿ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳು ಉಪಸ್ಥಿತರಿರುವರು.
ವಿಶೇಷವಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಹಾಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರುಗಳು ವೇದಿಕೆಯಲ್ಲಿ ಉಪಸ್ಥಿತರಿರಲಿದ್ದಾರೆ.
ಇನ್ನು, ನಗರದ ಪ್ರಮುಖ ರಸ್ತೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅದ್ದೂರಿ ರೋಡ್ ಶೋಗೆ ಕ್ಷಣಗಣನೆ ಆರಂಭವಾಗಿದ್ದು, ಎಲ್ಲೆಲ್ಲೂ ಬಿಜೆಪಿ ಬಾವುಟ ರಾರಾಜಿಸುತ್ತಿದೆ.
ರೋಡ್ ಶೋ ಸಾಗುವ ಮಾರ್ಗದ ಉದ್ದಕ್ಕೂ ಎಸ್’ಪಿಜಿ ಹದ್ದಿನ ಕಣ್ಣಿಟ್ಟಿದ್ದು, ಇಂಚಿಂಚೂ ಪ್ರದೇಶವನ್ನು ಪರಿಶೀಲಿಸಲಾಗಿದೆ. ರೋಡ್ ಶೋ ಸಾಗುವ ಮಾರ್ಗವನ್ನು ಸಂಪರ್ಕಿಸುವ ಎಲ್ಲ ರಸ್ತೆಗಳನ್ನು ಬಂದ್ ಮಾಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post