ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
2026ರ ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅದ್ದೂರಿ ಸಂಭ್ರಮಾಚರಣೆಗೆ ಸಿದ್ದತೆ ಪೂರ್ಣಗೊಂಡಿದೆ.
ಪ್ರಮುಖವಾಗಿ, ನಗರದ ಪ್ರಮುಖ ಸ್ಥಳಗಳಾಗಿರುವ ಎಂಜಿ ರಸ್ತೆ ಹಾಗೂ ಬ್ರಿಗೇಡ್ ರಸ್ತೆ ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಬಿಗಿ ಬಂದೋಬಸ್ತ್ ಕಲ್ಪಿಸಿದ್ದಾರೆ.
ಹೆಜ್ಜೆ ಹೆಜ್ಜೆಗೂ ಕಣ್ಗಾವಲು
ಎಂಜಿ ರಸ್ತೆ ಹಾಗೂ ಬ್ರಿಗೇಡ್ ರಸ್ತೆಗಳ ಮೇಲಿನ ಕಣ್ಣಾವಲಿಗೆ ಪ್ರತ್ಯೇಕ ಸಿಸಿಟಿವಿ ನಿಯಂತ್ರಣ ಕೊಠಡಿ ತೆರೆಯಲಾಗಿದ್ದು, ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಹಾಗೂ ಚರ್ಚ್ ಸ್ಟ್ರೀಟ್’ಗಳಲ್ಲಿ ಸುಮಾರು 3,400 ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.
ಅಲ್ಲದೇ ಎಐ ಕ್ಯಾಮೆರಾ ಬಳಸಿ ಕಣ್ಣಿಡಲಾಗುತ್ತಿದೆ. ಈ ಕ್ಯಾಮೆರಾಗಳ ಪೈಕಿ 400 ಪೊಲೀಸರು ಹಾಗೂ 3 ಸಾವಿರ ಖಾಸಗಿಯವರಿಗೆ ಸೇರಿದ ಕ್ಯಾಮೆರಾಗಳಾಗಿವೆ. ಹೊಸ ವರ್ಷಾಚರಣೆ ವೇಳೆ ಗುಂಪಿನಲ್ಲಿ ಸಣ್ಣ ಗಲಭೆ ನಡೆದರೂ ಮಾಹಿತಿ ಪಡೆಯಬಹುದು. ಪ್ರತಿ 50 ಮೀಟರ್’ಗೂ ಕ್ಯಾಮೆರಾಗಳಿದ್ದು ಸಂಪೂರ್ಣ ಕಣ್ಣಾವಲಿರುತ್ತದೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















