ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: ಕೊರೋನಾ ವಿರುದ್ಧದ ಲಸಿಕೆ ಯಾವಾಗ ದೊರೆಯುತ್ತದೆ ಎಂದು ಎಲ್ಲರೂ ಕೇಳುತ್ತಿದ್ದರು. ಈಗ ಅದು ದೊರೆತಿದ್ದು, ಇಡಿಯ ವಿಶ್ವವೇ ನಮ್ಮ ಭಾರತದ ಕಡೆಗೆ ತಿರುಗಿ ನೋಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ದೇಶವ್ಯಾಪಿ ಕೊರೋನಾ ಲಸಿಕೆ ಅಭಿಯಾನಕ್ಕೆ ಆನ್’ಲೈನ್ ಮೂಲಕ ಚಾಲನೆ ನೀಡಿ ದೇಶವನ್ನುದ್ದೇಶಿಸಿ ಅವರು ಮಾತನಾಡಿದ್ದಾರೆ.
ದೇಶಕ್ಕೆ ಲಸಿಕೆ ದೊರೆತಿರುವ ಈ ಸಂದರ್ಭದಲ್ಲಿ ದೇಶದ ಜನತೆಗೆ ಅಭಿನಂದನೆಗಳನ್ನು ಸಲ್ಲಿಸಲು ಇಚ್ಛಿಸುತ್ತೇನೆ. ಸಾಮಾನ್ಯವಾಗಿ ಒಂದು ಲಸಿಕೆ ಕಂಡು ಹಿಡಿಯಲು ಹಲವು ವರ್ಷಗಳೇ ಬೇಕಾಗುತ್ತಿತ್ತು. ಆದರೆ, ಕೆಲವೇ ಸಮಯದಲ್ಲಿ ಒಂದಲ್ಲ, ಎರಡು ದೇಶೀ ನಿರ್ಮಿತ ಲಸಿಕೆಗಳು ತಯಾರಾಗಿವೆ. ಇದೇ ವೇಳೆ ಇತರೆ ಲಸಿಕೆಗಳ ಅಭಿವೃದ್ಧಿ ಕೂಡ ವೇಗವಾಗಿ ನಡೆಯುತ್ತಿದೆ ಎಂದರು.
ಕೊರೋನಾ ಲಸಿಕೆಯ ಎರಡು ಲಸಿಕೆಗಳು ಬಹಳ ಮುಖ್ಯ. ಎರಡೂ ವ್ಯಾಕ್ಸಿನೇಷನ್‌ಗಳ ನಡುವೆ ಒಂದು ತಿಂಗಳ ಅಂತರವಿರಬೇಕು ಎಂದು ತಜ್ಞರು ಹೇಳಿದ್ದಾರೆ. ಇದನ್ನು ಪಾಲಿಸಬೇಕು ಎಂದರು.
ಲಸಿಕೆ ಚಾಲನೆ ನೀಡಿದ ಬಳಿಕ ಪ್ರಧಾನಿಯವರು ಜನಸಾಮಾನ್ಯರು ಲಸಿಕೆ ಪಡೆಯಲು ಕಡ್ಡಾಯವಾಗಿರುವ ಕೋ-ವಿನ್ ಆ್ಯಪ್’ಗೂ ಚಾಲನೆ ನೀಡಿದ್ದಾರೆ.
ಇನ್ನು, ಇಡಿಯ ದೇಶವೇ ಕಾತರದಿಂದ ಕಾಯುತ್ತಿದ್ದ ಕೊರೋನಾ ಲಸಿಕೆ ಈಗ ದೇಶಕ್ಕೆ ದೊರೆತಿದ್ದು, ಇಂದಿನಿಂದ ಇದರ ಅಭಿಯಾನ ಆರಂಭವಾಗಿದೆ. ಮೊದಲ ದಿನ 3006 ಲಸಿಕಾ ಕೇಂದ್ರಗಳಲ್ಲಿ 3 ಲಕ್ಷ ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ನೀಡಲಾಗುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
 
	    	




 Loading ...
 Loading ... 
							



 
                
Discussion about this post