ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪಾಸಿಟಿವ್ ಪ್ರಕರಣಗಳ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡಿರುವ ರಾಜ್ಯ ಸರ್ಕಾರ ಹೆಚ್ಚು ಪ್ರಕರಣಗಳು ಕಂಡುಬಂದ ಬಡಾವಣೆಗಳನ್ನು ಲಾಕ್ ಡೌನ್ ಮಾಡಲು ಆದೇಶಿಸಿದೆ.
ಈ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್. ಯುಡಿಯೂರಪ್ಪ ನೇತೃತ್ವದಲ್ಲಿ ನಡೆದ ತುರ್ತು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
ಹೆಚ್ಚು ಪ್ರಕರಣಗಳು ಪತ್ತೆಯಾದ ಕೆ.ಆರ್. ಮಾರ್ಕೆಟ್, ಸಿದ್ದಾಪುರ, ವಿವಿ ಪುರಂ, ಕಲಾಸಿಪಾಳ್ಯ, ಜಯನಗರ, ಬಸವನಗುಡಿ, ಶಿವಾಜಿನಗರ, ಚಾಮರಾಜಪೇಟೆ, ಚಿಕ್ಕಪೇಟೆ, ರಾಜಾಜಿನಗರ, ಮಲ್ಲೇಶ್ವರಂಗಳಲ್ಲಿ ಲಾಕ್ ಡೌನ್ ಬಿಗಿಗೊಳಿಸಲು ನಿರ್ಧರಿಸಲಾಗಿದೆ.
ಈ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಸಂಫೂರ್ಣ ಲಾಕ್ ಡೌನ್ ಮಾಡಲಿದ್ದು, ಮುಂಜಾನೆ 7ರಿಂದ 10ರವೆಗೂ ತೀರಾ ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ಅವಕಾಶವಿದೆ ಎಂದು ತಿಳಿಸಲಾಗಿದೆ.
ಇನ್ನು, ಕ್ವಾರಂಟೈನ್ ನಿಯಮಗಳನ್ನು ಉಲ್ಲಂಘಿಸುವ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅಗತ್ಯವಿದ್ದರೆ ಎಫ್’ಐಆರ್ ಸಹ ದಾಖಲಿಸಲಾಗುವುದು ಎಂದು ಸಭೆಯಲ್ಲಿ ನಿರ್ಧರಿಸಲಾಗಿದೆ.
(ವರದಿ: ಡಿ.ಎಲ್. ಹರೀಶ್, ಬೆಂಗಳೂರು)
Get In Touch With Us info@kalpa.news Whatsapp: 9481252093







Discussion about this post