ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲೆಯಲ್ಲಿ ಕೋವಿಡ್ #Covid19 ಪ್ರಕರಣಗಳು ಮತ್ತೆ ಪತ್ತೆಯಾದ ಬೆನ್ನಲ್ಲೇ ಭದ್ರಾವತಿಯಲ್ಲಿ #Bhadravathi ಈ ಅಲೆಯ ಮೊಟ್ಟ ಮೊದಲ ಪಾಸಿಟಿವ್ ಪ್ರಕರಣ ಇಂದು ಪತ್ತೆಯಾಗಿದೆ.
ಈ ಕುರಿತಂತೆ ಜಿಲ್ಲಾಡಳಿತ ಮಾಹಿತಿ ಬಿಡುಗಡೆ ಮಾಡಿದ್ದು, ಸೋಮವಾರ ಒಟ್ಟು 103 ಮಂದಿಯ ಸ್ಯಾಂಪಲ್ ಪರೀಕ್ಷೆ ಮಾಡಲಾಗಿದೆ. ಇಂದು ಒಂದು ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಇದು ಭದ್ರಾವತಿ ತಾಲೂಕಿನದು ಎಂದು ವರದಿಯಾಗಿದೆ.
ಜಿಲ್ಲೆಯಲ್ಲಿ ಸದ್ಯ ಒಟ್ಟು 8 ಪಾಸಿಟಿವ್ ಪ್ರಕರಣಬಿದ್ದು, ಇದರಲ್ಲಿ ಇಬ್ಬರು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, 6 ಮಂದಿ ಹೋಂ ಐಸೋಲೇಶನ್’ನಲ್ಲಿಯೇ ಇದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post