No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Friday, April 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಜನಪರ ಧ್ವನಿಯಾಗಿ ಸಾಹಿತ್ಯ ರಚಿಸಿ: ಡಾ.ವೀಣಾಭಟ್ ಕರೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 10, 2019
in Small Bytes, ಭದ್ರಾವತಿ
0
ಜನಪರ ಧ್ವನಿಯಾಗಿ ಸಾಹಿತ್ಯ ರಚಿಸಿ: ಡಾ.ವೀಣಾಭಟ್ ಕರೆ
Share on FacebookShare on TwitterShare on WhatsApp

ಭದ್ರಾವತಿ: ಜನಪ್ರಿಯತೆಗಾಗಿ ಸಾಹಿತ್ಯಗಳನ್ನು ರಚಿಸದೆ, ಜನಪರ ಭಾವನೆಗಳಿಗೆ ಧ್ವನಿಯಾಗಿ ಸಾಹಿತ್ಯ ರಚಿಸಿದಾಗ ಮಾತ್ರ ಉತ್ತಮ ಸಾಹಿತ್ಯ ಹೊರ ಹೊಮ್ಮಲು ಸಾದ್ಯ ಎಂದು ನಗರದ ಪ್ರಸೂತಿ ತಜ್ಞೆ ಡಾ.ವೀಣಾಭಟ್ ಕರೆ ನೀಡಿದರು.

ನಯನ ಆಸ್ಪತ್ರೆಯ ಅನಸೂಯಮ್ಮ ಐತಾಳ್ ಸಭಾಂಗಣದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಏರ್ಪಡಿಸಿದ್ದ ಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಉತ್ತಮ ಸಮಾಜ ನಿರ್ಮಾಣದಲ್ಲಿ ಸಾಹಿತ್ಯದ ಪಾತ್ರ ಗಣನೀಯವಾಗಿರುತ್ತದೆ. ಮಾನವನು ಪರಿಸರದ ಕುರಿತ ಕಾಳಜಿ ಹೊಂದಿರುವ ಸಾಹಿತ್ಯವೇ ನಿಜವಾದ ಸಾಹಿತ್ಯವಾಗಲು ಸಾಧ್ಯ. ಸಾಹಿತಿಗಳು ನಾಡು ನುಡಿ ಬಿಂಬಿಸುವ ಕಾರ್ಯ ಮಾಡಿರುವ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ಕಾಪಾಡುವಂತಾಗಬೇಕು ಎಂದರು.

ನ್ಯೂಟೌನ್ ಸರ್.ಎಂ.ವಿ. ಕಾಲೇಜು ಕನ್ನಡ ಸಹ ಪ್ರಾಧ್ಯಾಪಕ ಡಾ.ಸಿ.ಎಸ್. ಷಣ್ಮುಖಪ್ಪ ಮಾತನಾಡಿ, ರಾಜಪ್ರಭುತ್ವ, ಆಂಗ್ಲರ ಆಳ್ವಿಕೆ ನಡುವೆ ಅನೇಕ ಎಡರು, ತೊಡರುಗಳನ್ನು ಸಮರ್ಥವಾಗಿ ಎದುರಿಸಿ ಕನ್ನಡ ಸಾಹಿತ್ಯ ಪರಿಷತ್ ಬೆಳೆದುಬಂದಿದೆ. ಇದರ ಬೆಳವಣಿಗೆಗೆ ಅಂದಿನ ಬೇಂದ್ರೆ, ಡಿವಿಜಿ ಕುವೆಂಪು, ನಂಜಯ್ಯ, ಬಿ.ಎಂ. ಶ್ರೀ ಮುಂತಾದ ಅನೇಕ ಮಹನೀಯರ ಕೊಡುಗೆ ಅಪಾರವದುದು. ರನ್ನ, ಪಂಪ, ಕುಮಾರವ್ಯಾಸ ಮುಂತಾದ ಹಳೇಗನ್ನಡ ಕನ್ನಡ ಸಾಹಿತ್ಯವನ್ನು ನವ್ಯಗನ್ನಡಕ್ಕೆ ಪರಿವರ್ತಿಸಿ ಪುಸ್ತಕ ರೂಪದಲ್ಲಿ ಮುದ್ರಿಸಿ ಓದುಗರಿಗೆ ಕನ್ನಡ ಸಾಹಿತ್ಯ ಪರಿಷತ್ ನೀಡಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.

ಸಾಹಿತ್ಯಗಳನ್ನು ಓದುವುದರೊಂದಿಗೆ ಅದನ್ನು ಅರ್ಥೈಸಿಕೊಂಡಲ್ಲಿ ಮಾತ್ರ ಇಂದಿನ ಅನೇಕ ಸಮಸ್ಯೆಗಳಿಗೆ ಪರಿಹಾರ ದೊರಕುತ್ತದೆ. ಆದರೆ ನಮ್ಮಲ್ಲಿ ಕನ್ನಡ ಪುಸ್ತಕ ಓದುವ ಮನಃಸ್ಥಿತಿಯಿಂದ ದೂರವಾಗುತ್ತಿರುವುದು ವಿಷಾದನೀಯ. ಬರೆದ ಸಾಹಿತ್ಯವೆಲ್ಲ ಉಳಿಯುವುದಿಲ್ಲ. ಯಾವ ಸಾಹಿತ್ಯ ಜನಪರಕಾಳಜಿಯಿಂದ ರಚಿತವಾಗಿರುತ್ತದೆಯೋ ಅಂತಹ ಸಾಹಿತ್ಯ ಕೃತಿ ಜನಮಾನಸದಲ್ಲಿ ಚಿರಸ್ಥಾಯಿಯಾಗಿ ಉಳಿಯುತ್ತದೆ ಎಂದರು.

ಕಸಾಪ ತಾಲೂಕು ಅಧ್ಯಕ್ಷ ಬೇಲಿಮಲ್ಲೂರು ಎಂ.ನಾಗಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗೌರವ ಕಾರ್ಯದರ್ಶಿ ಅಪರಂಜಿ ಶಿವರಾಜ್, ಅಪೇಕ್ಷ ಮಂಜುನಾಥ್ ಮುಂತಾದವರು ವೇದಿಕೆಯಲ್ಲಿದ್ದರು.

ಇದೇ ಸಂದರ್ಭದಲ್ಲಿ ಎಚ್.ಎಸ್.ಗುರುರಾಜರಾವ, ಕೆ.ಎನ್. ಭೈರಪ್ಪಗೌಡ, ಸಿದ್ಧಲಿಂಗಯ್ಯ, ರಾಜಶೇಖರ್, ಬಸನ ಗೌಡ ಮಾಳಗಿ, ವಿರೂಪಾಕ್ಷಪ್ಪ, ಪರಮೇಶ್ವರಪ್ಪ, ಶೈಲೇಶ್‌ಕೋಠಿ, ರೂಪಾರಾವ್ ಮುಂತಾದವರನ್ನು ಸನ್ಮಾನಿಸಿ ಗೌರವಿಸಲಾಯಿತು.
(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Tags: BhadravathiDr. Veena BhatKannada NewsMalnad Newsಡಾ.ವೀಣಾ ಭಟ್ನಯನ ಆಸ್ಪತ್ರೆ
Share196Tweet123Send
Previous Post

ಫಲಿಮಾರು ಮಠದ ನೂತನ ಉತ್ತರಾಧಿಕಾರಿಗೆ ಸನ್ಯಾಸ ದೀಕ್ಷೆ, ನಾಳೆ ಪಟ್ಟಾಭಿಶೇಕ

Next Post

ಶಿವಮೊಗ್ಗ: ಹದಿಹರೆಯದವರ ಜಾಗೃತಿಗೆ ಮಾನಸ ಟ್ರಸ್ಟ್‌’ನಿಂದ ಮೇ 17ರಂದು ಕಾರ್ಯಾಗಾರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ: ಹದಿಹರೆಯದವರ ಜಾಗೃತಿಗೆ ಮಾನಸ ಟ್ರಸ್ಟ್‌’ನಿಂದ ಮೇ 17ರಂದು ಕಾರ್ಯಾಗಾರ

ಶಿವಮೊಗ್ಗ: ಹದಿಹರೆಯದವರ ಜಾಗೃತಿಗೆ ಮಾನಸ ಟ್ರಸ್ಟ್‌'ನಿಂದ ಮೇ 17ರಂದು ಕಾರ್ಯಾಗಾರ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ!, ಏನಿದು ಕೇಸ್?

ಭದ್ರಾವತಿ, ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದ ಐವರಿಗೆ ಜೈಲು!

April 17, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಮಂಗಳೂರು-ಸುಬ್ರಹ್ಮಣ್ಯ-ಮಂಗಳೂರು ರೈಲು ಪ್ರಯಾಣಿಕರಿಗೆ ಇಲ್ಲಿದೆ ಮಹತ್ವದ ಅಪ್ಡೇಟ್

April 16, 2026
ಶಿವಮೊಗ್ಗ | ಮೂರು ಅಪರಾಧ ಪ್ರಕರಣ ಸುದ್ದಿ ಒಂದೇ ಕ್ಲಿಕ್’ನಲ್ಲಿ

ಮದುವೆ ಸಮಾರಂಭದಲ್ಲಿ ಗೃಹಿಣಿಯ ಸೊಂಟ ಮುಟ್ಟಿದ ಯುವಕ | ಪ್ರಶ್ನಿಸಿದವರ ಮೇಲೆ ಹಲ್ಲೆ

April 16, 2026
ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆ | ಶಿಕಾರಿಪುರದ ಕುಮದ್ವತಿ ಕೇಂದ್ರಿಯ ವಸತಿ ಶಾಲೆಗೆ ಶೇ.100 ಫಲಿತಾಂಶ

ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆ | ಶಿಕಾರಿಪುರದ ಕುಮದ್ವತಿ ಕೇಂದ್ರಿಯ ವಸತಿ ಶಾಲೆಗೆ ಶೇ.100 ಫಲಿತಾಂಶ

April 16, 2026
ಗಾನ ವೇದಿಕೆಯಲ್ಲಿ ಪುಟ್ಟ ಗಾಯಕರ ವೈಭವ ‘ಸರಿಗಮಪ ಲಿಟಲ್ ಚಾಂಪ್ಸ್’ | ಏಪ್ರಿಲ್ 18 ರಿಂದ ಜೀ಼ ಕನ್ನಡ ವಾಹಿನಿಯಲ್ಲಿ

ಗಾನ ವೇದಿಕೆಯಲ್ಲಿ ಪುಟ್ಟ ಗಾಯಕರ ವೈಭವ ‘ಸರಿಗಮಪ ಲಿಟಲ್ ಚಾಂಪ್ಸ್’ | ಏಪ್ರಿಲ್ 18 ರಿಂದ ಜೀ಼ ಕನ್ನಡ ವಾಹಿನಿಯಲ್ಲಿ

April 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL