ಕಲ್ಪ ಮೀಡಿಯಾ ಹೌಸ್ | ಉಡುಪಿ |
ಉಡುಪಿ (Udupi) ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಕ್ರಿಯೇಟಿವ್ ಗ್ಲೋಬಲ್ ಸ್ಕೂಲಿನ (Creative Global School) ವಿದ್ಯಾರ್ಥಿನಿಯರು ಗಮನಾರ್ಹ ಸಾಧನೆ ಮಾಡುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ.
ಉಡುಪಿ ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಅಜ್ಜರಕಾಡು ಬಾಲಕಿಯರ ಪ್ರೌಢಶಾಲೆಯ ವತಿಯಿಂದ ಉಡುಪಿಯ ಅಜ್ಜರಕಾಡು ಈಜುಕೊಳದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಕ್ರಿಯೇಟಿವ್ ಗ್ಲೋಬಲ್ ಸ್ಕೂಲಿನ 6ನೇ ತರಗತಿಯ ವಿದ್ಯಾರ್ಥಿನಿಯರು ಪ್ರಶಸ್ತಿ ಗಳಿಸಿದ್ದಾರೆ.

50 ಮೀಟರ್ ಈಜು ಸ್ಪರ್ಧೆಯಲ್ಲಿ ಆದ್ಯ ಎಸ್. ಕಿರಣ್ಗೆ ಎರಡು ಬಹುಮಾನ
ಶಾಲೆಯ ವಿದ್ಯಾರ್ಥಿನಿ ಆದ್ಯ ಎಸ್. ಕಿರಣ್ ಅವರು 50 ಮೀಟರ್ ಬೆಸ್ಟ್ ಸ್ಟ್ರೋಕ್ ವಿಭಾಗದಲ್ಲಿ ದ್ವಿತೀಯ ಸ್ಥಾನ ಹಾಗೂ 50 ಮೀಟರ್ ಫ್ರೀ ಸ್ಟೈಲ್ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದು ಎರಡು ವಿಭಾಗಗಳಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಿದ್ದಾರೆ.
Also Read>> ಕುಮದ್ವತಿ ಕಾಲೇಜಿನಲ್ಲಿ 71ನೇ ಕನ್ನಡ ರಾಜ್ಯೋತ್ಸವ ಸಂಭ್ರಮ
ಇದೇ ಶಾಲೆಯ ಮತ್ತೊಬ್ಬ ವಿದ್ಯಾರ್ಥಿನಿ ಅದಿತಿ ತಂತ್ರಿ ಅವರು 50 ಮೀಟರ್ ಬೆಸ್ಟ್ ಸ್ಟ್ರೋಕ್ ವಿಭಾಗದಲ್ಲಿ ತೃತೀಯ ಸ್ಥಾನ ಗಳಿಸಿ ಸಾಧನೆ ಮಾಡಿದ್ದಾರೆ.
ವಿದ್ಯಾರ್ಥಿನಿಯರ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ. ಕ್ರೀಡಾ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳಲು ಪ್ರೋತ್ಸಾಹ ನೀಡುತ್ತಿರುವ ಶಾಲೆಯ ಪ್ರಯತ್ನಕ್ಕೆ ಈ ಸಾಧನೆ ಮತ್ತಷ್ಟು ಮೆರುಗು ತಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











