ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಶುಕ್ರವಾರ ಇಬ್ಬರನ್ನು ಬಂಧಿಸಿ 40 ಸಾವಿರ ರೂ. ಹಣವನ್ನು ವಶಪಡಿಸಿಕೊಂಡಿದ್ದಾರೆ.
ಶಿವಮೊಗ್ಗ ನಗರದ ಮಲವಗೊಪ್ಪ ಬಸ್ಟಾಪ್’ನಲ್ಲಿ ಆರೋಪಿಗಳು ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಮಾಡುತ್ತಿರುವ ಬಗ್ಗೆ ಬಂದ ಮಾಹಿತಿ ಮೇರೆಗೆ ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್’ಪೆಕ್ಟರ್ ಮತ್ತು ಸಿಬ್ಬಂಂದಿಗಳನ್ನೊಳಗೊಂಡ ತಂಡವು ಆರೋಪಿಗಳನ್ನು ವಶಕ್ಕೆ ಪಡೆದು, ಆರೋಪಿಗಳಿಂದ 40 ಸಾವಿರ ರೂ ನಗದು ಹಾಗೂ 2 ಮೊಬೈಲ್ ಪೋನ್‌ಗಳನ್ನು ವಶಪಡಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.
ಮಲವಗೊಪ್ಪದ ಮಹ್ಮದ್ ಮಸೂದ್(43) ಹಾಗೂ ಜೆಪಿ ನಗರದ ಶೇಖರ್(26) ಬಂಧಿತರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







Discussion about this post