ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಲ್ಲಿನ ಇಲಿಯಾಜ್ ನಗರದಲ್ಲಿ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಂಡ್ಲಿ ವಾಸಿ ಆಸಿಫ್(25) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಜಬೀ ಎಂಬ ಆರೋಪಿಯನ್ನುಪೊಲೀಸರು ಬಂಧಿಸಿದ್ದಾರೆ.
ವೈಯಕ್ತಿಕ ಕಾರಣಗಳಿಗಾಗಿ ಈ ಕೊಲೆ ನಡೆದಿದೆ ಎಂದು ಹೇಳಲಾಗಿದ್ದು, ಆಸಿಫ್ ಮೇಲೆದ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಹೆಚ್ಚಿನ ವಿವರ ತಿಳಿದುಬರಬೇಕಿದೆ.
Discussion about this post