ಹಿರಿಯೂರು: ಖಾಸಗಿ ಬಸ್ ಮತ್ತು ಲಾರಿ ಡಿಕ್ಕಿಯಾಗಿ ಚಾಲಕ ವೆಂಕಟೇಶ(40) ಸ್ಥಳದಲ್ಲಿಯೇ ಮೃತಪಟ್ಟಿದ್ದು, ಭಾರೀ ಅನಾಹುತ ಸ್ವಲ್ಪದರಲ್ಲೇ ತಪ್ಪಿದೆ.
ತಾಲೂಕಿನ ಹರ್ತಿಕೊಟೆ ಕಪಿಲೆಹಟ್ಟಿ ರಾಷ್ಟೀಯ ಹೆದ್ದಾರಿಯಲ್ಲಿ ಬಳಿ ಇಂದು ಬೆಳಗ್ಗೆ ಘಟನೆ ನಡೆದಿದ್ದು, ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ಹೊಡೆದಿದ್ದರಿಂದ ಘಟನೆ ನಡೆದಿದೆ.

ಬೆಂಗಳೂರಿನಿಂದ ಬಳ್ಳಾರಿ ಕಡೆ ತೆರಳುತ್ತಿದ್ದ ಖಾಸಗಿ ಬಸ್ ಮತ್ತು ಚಳ್ಳಕೆರೆಯಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಲಾರಿ ನಡುವೆ ಡಿಕ್ಕಿಯಾಗಿ ಬಸ್ ಹೊತ್ತಿ ಉರಿದ ಪರಿಣಾಮವಾಗಿ ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತನ ಬಸ್’ನಲ್ಲಿದ್ದ 15 ಪ್ರಯಾಣಿಕರಿಗೆ ಗಾಯಗಳಾಗಿವೆ. ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಐಮಂಗಳ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)














