No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Sunday, September 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಹೊಳೆಹೊನ್ನೂರು | ಜನ್ಮಕೊಟ್ಟ ತಂದೆಯನ್ನೇ ಕತ್ತುಹಿಸುಕಿ ಕೊಂದ ಪುತ್ರ | ಕಾರಣವೇನು?

kalpa News by kalpa News
August 3, 2026
in ಶಿವಮೊಗ್ಗ
0
Crime News holehonnur-son-killed his own father
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  |

ಕುಡಿದ ಅಮಲಿನಲ್ಲಿ ಕುಟುಂಬಸ್ಥರ ಮೇಲೆ ಗಲಾಟೆ ಮಾಡಿ ಹಲ್ಲೆ ನಡೆಸಲು ಮುಂದಾಗಿದ್ದ ವ್ಯಕ್ತಿಯನ್ನು ಆತನ ಮಗನೇ ಕತ್ತುಹಿಸುಕಿ ಕೊಂದಿರುವ (Crime News) ಘಟನೆ ಭದ್ರಾವತಿ (Bhadravathi) ತಾಲೂಕಿನ ಹೊಳೆಹೊನ್ನೂರಿನ (Holehonnur) ಅರಶಿನಘಟ್ಟದಲ್ಲಿ ಭಾನುವಾರ ರಾತ್ರಿ ನಡೆದಿದೆ.

ಮೃತರನ್ನು ಶಿವಗ ನಾಯ್ಕ (55) ಎಂದು ಗುರುತಿಸಲಾಗಿದ್ದು, ಆರೋಪಿ ಪುತ್ರನನ್ನು ಮಂಜುನಾಥ ನಾಯ್ಕ ಎಂದು ಗುರುತಿಸಲಾಗಿದೆ. ಅರಶಿನಗಟ್ಟ ತಾಂಡಾದಲ್ಲಿ ಕುಟುಂಬ ಕಲಹವು ದಾರುಣ ತಿರುವು ಪಡೆದಿದೆ.

ಸಾಲದ ವಿಚಾರದಿಂದ ಕುಟುಂಬ ಕಲಹ ಆರಂಭ

ಎಫ್‌ಐಆರ್’ನಲ್ಲಿ ದಾಖಲಾಗಿರುವ ಮಾಹಿತಿಯಂತೆ, ಶಿವಗ ನಾಯ್ಕ ಅವರು ಹೊಸ ಮನೆ ನಿರ್ಮಾಣ ಹಾಗೂ ಇಬ್ಬರು ಪುತ್ರರ ವಿವಾಹಕ್ಕಾಗಿ ಸಾಕಷ್ಟು ಸಾಲ ಮಾಡಿಕೊಂಡಿದ್ದರು. ಈ ವಿಚಾರವಾಗಿ ಮನೆಯಲ್ಲಿ ಪದೇಪದೇ ಗಲಾಟೆ ನಡೆಯುತ್ತಿತ್ತು. ನಂತರ ಶಿವಗ ನಾಯ್ಕ ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ಸೊಸೆಯರನ್ನು ಹೊಸ ಮನೆಯಿಂದ ಹೊರಗೆ ಕಳುಹಿಸಿದ್ದು, ಅವರು ಹಳೆಯ ಮನೆಯಲ್ಲಿ ವಾಸವಾಗಿದ್ದರು.

ಆದರೆ ಶಿವಗ ನಾಯ್ಕ ಅವರು ಮದ್ಯಪಾನ ಮಾಡಿ ಆಗಾಗ ಹಳೆಯ ಮನೆಗೆ ಬಂದು ಗಲಾಟೆ ಮಾಡುತ್ತಿದ್ದರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ತಾಯಿಗೆ ಹಲ್ಲೆ ನಡೆಸುತ್ತಿದ್ದ ವೇಳೆ ಮಧ್ಯಪ್ರವೇಶಿಸಿದ ಪುತ್ರ

ಆಗಸ್ಟ್ 2ರಂದು ರಾತ್ರಿ ಸುಮಾರು 8 ಗಂಟೆ ವೇಳೆಗೆ, ಶಿವಗ ನಾಯ್ಕ ಮದ್ಯದ ಅಮಲಿನಲ್ಲಿ ಹಳೆಯ ಮನೆಗೆ ಬಂದು, ಈ ಮನೆಯಲ್ಲಿ ಇರಬಾರದು, ಮನೆ ಬಿಟ್ಟು ಹೋಗಿ ಎಂದು ಪತ್ನಿ ಪಾರ್ವತಿ ಬಾಯಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಲು ಆರಂಭಿಸಿದ್ದಾರೆ ಎನ್ನಲಾಗಿದೆ.Kumadvathi College Shikariura

ಈ ವೇಳೆ ಅಲ್ಲೆ ಇದ್ದ ಪುತ್ರ ಮಂಜುನಾಥ ನಾಯ್ಕ, ನನ್ನ ತಾಯಿಗೆ ಏಕೆ ಹೊಡೆಯುತ್ತಿದ್ದೀರಿ? ಎಂದು ಪ್ರಶ್ನಿಸಿ ಮಧ್ಯಪ್ರವೇಶಿಸಿದ್ದಾನೆ. ಇದರಿಂದ ತಂದೆ-ಮಗನ ನಡುವೆ ಮಾತಿನ ಚಕಮಕಿ ತೀವ್ರಗೊಂಡು, ಇಬ್ಬರೂ ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

ಕುತ್ತಿಗೆ ಹಿಸುಕಿದ ಪರಿಣಾಮ ಉಸಿರುಗಟ್ಟಿ ಸಾವು

ಜಗಳದ ವೇಳೆ ಮಂಜುನಾಥ ನಾಯ್ಕ ತನ್ನ ತಂದೆಯ ಕುತ್ತಿಗೆಯನ್ನು ಕೈಗಳಿಂದ ಬಿಗಿಯಾಗಿ ಹಿಸುಕಿದ ಪರಿಣಾಮ ಶಿವಗ ನಾಯ್ಕ ಉಸಿರಾಟದ ತೊಂದರೆಯಿಂದ ನೆಲಕ್ಕುರುಳಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಗಲಾಟೆಯ ಶಬ್ದ ಕೇಳಿ ಸ್ಥಳಕ್ಕೆ ಬಂದ ಸಂಬಂಧಿಕರಾದ ಮಹೇಶ್ ನಾಯ್ಕ ಹಾಗೂ ಕೀರ್ಯಾ ನಾಯ್ಕ ಅವರು ಇಬ್ಬರನ್ನು ಬೇರ್ಪಡಿಸಿದ್ದಾರೆ. ಬಳಿಕ ಶಿವಗ ನಾಯ್ಕ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಿದಾಗ ಅವರು ಪ್ರಜ್ಞೆ ತಪ್ಪಿದ್ದು, ಪರಿಶೀಲಿಸಿದಾಗ ಸ್ಥಳದಲ್ಲೇ ಮೃತಪಟ್ಟಿರುವುದು ತಿಳಿದುಬಂದಿದೆ.

Also Read>> ವಿಮೆ ಹಣಕ್ಕಾಗಿ ಪತ್ನಿಯನ್ನೇ ಕೊಂದು ಅಪಘಾತದ ನಾಟಕ; ಪತಿ ಬಂಧನ

ಪತ್ನಿಯಿಂದಲೇ ಪುತ್ರನ ವಿರುದ್ಧ ದೂರು

ಘಟನೆಯ ಬಳಿಕ ಮೃತನ ಪತ್ನಿ ಪಾರ್ವತಿ ಬಾಯಿ (51) ಹೊಳೆಹೊನ್ನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ತನ್ನ ಪುತ್ರ ಮಂಜುನಾಥ ನಾಯ್ಕನೇ ತನ್ನ ಗಂಡನ ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ.

ಪ್ರಕರಣ ದಾಖಲು – ತನಿಖೆ ಮುಂದುವರಿಕೆ

ಘಟನೆ ಕುರಿತಂತೆ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 211/2026ರಡಿ ಭಾರತೀಯ ನ್ಯಾಯ ಸಂಹಿತೆ ಕಲಂ 103(1) ಅನ್ವಯ ಪ್ರಕರಣ ದಾಖಲಾಗಿದೆ.PES Shivamogga

ಹೊಳೆಹೊನ್ನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ವರದಿ ಬಂದ ಬಳಿಕ ಸಾವಿನ ನಿಖರ ಕಾರಣ ಇನ್ನಷ್ಟು ಸ್ಪಷ್ಟವಾಗಲಿದೆ.

ಪೊಲೀಸರು ಪ್ರಕರಣದ ಎಲ್ಲಾ ಆಯಾಮಗಳ ಕುರಿತು ತನಿಖೆ ಮುಂದುವರೆಸಿದ್ದಾರೆ.

Crime News : Son Allegedly Strangles Father to Death in Shivamogga

Bhadravati: A family dispute allegedly ended in a tragic murder after a son reportedly strangled his father to death during an argument at Arashinagatta Tanda village under Holehonnur Police Station limits in Bhadravathi taluk of Shivamogga district on Sunday night.

The deceased has been identified as Shivaga Naik (55), a daily wage labourer. The accused, Manjunatha Naik, has been booked under Section 103(1) of the Bharatiya Nyaya Sanhita (BNS), 2023. A case has been registered at Holehonnur Police Station as Crime No. 211/2026.

According to the FIR, Shivaga Naik had constructed a new house and incurred heavy debts after building the house and arranging the marriages of his two sons. The financial burden allegedly led to frequent quarrels within the family. Following repeated disputes, Shivaga Naik reportedly asked his wife, sons, and daughters-in-law to leave the new house, after which they began living in an older house nearby.

Police said Shivaga Naik frequently visited the old house in an intoxicated condition and allegedly created disturbances.On the night of August 2, at around 8:00 p.m., Shivaga Naik allegedly arrived at the old house after consuming alcohol and demanded that the family vacate the premises. He is also alleged to have verbally abused and assaulted his wife, Parvathi Bai (51).

Hearing the commotion, his elder son Manjunatha intervened and questioned his father for assaulting his mother. This reportedly led to a heated argument, which soon escalated into a physical fight between the father and son.

During the altercation, Manjunatha allegedly grabbed his father’s neck and strangled him. Shivaga Naik reportedly collapsed and became unconscious.

Family members and neighbours rushed to the spot after hearing the noise and separated the two. They attempted to take Shivaga Naik to a hospital, but he was found to have died before he could receive medical treatment.

Based on a complaint lodged by the deceased’s wife, Holehonnur Police registered a murder case against Manjunatha Naik. The accused has been taken into custody, and further investigation is underway.

Police have sent the body for post-mortem examination, and further legal proceedings are in progress.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.newsKalpa News Advertising Disclaimer

Tags: BhadravathiCrime NewsHolehonnurKannada News WebsiteLatest News KannadaLocal NewsMalnad NewsMurderPolice NewsShimogaShivamoggaShivamogga NewsSon Killed His Fatherಭದ್ರಾವತಿಹೊಳೆಹೊನ್ನೂರು
Share275Tweet172Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ: ಸಂಸ್ಕಾರ ಭಾರತಿಯಿಂದ ಗುರುವಂದನೆ ಕಾರ್ಯಕ್ರಮ; ಸಾಧಕರಿಗೆ ಗೌರವ

Next Post

ಯಡಕುಮರಿ ಭೂಕುಸಿತ | ಸಂಚಾರ ಪುರಾರಂಭ | ಮಂಗಳೂರು – ವಿಜಯಪುರ ರೈಲು ಯಶಸ್ವಿ ಸಂಚಾರ

kalpa News

kalpa News

Next Post
Indian Railway : Train-services-resume-ghat-section-mysuru-17378-first-train-after-landslide

ಯಡಕುಮರಿ ಭೂಕುಸಿತ | ಸಂಚಾರ ಪುರಾರಂಭ | ಮಂಗಳೂರು - ವಿಜಯಪುರ ರೈಲು ಯಶಸ್ವಿ ಸಂಚಾರ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL