Read - < 1 minute
ಸಾಗರ: ಆವಿನಹಳ್ಳಿ ಸಮೀಪ ಕಾಗೇಹಳ್ಳ ಹೊಸೂರು ಬಳಿ ಇಂದು ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಬೈಕ್ ಹಾಗೂ ಟೆಂಪೋ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಚಾಲಕ ಓಂಕಾರ್(21) ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಕುಳಿತಿದ್ದ ನಂದೀಶ್(13) ಹಾಗೂ ನಂದನ್(14) ಅವರುಗಳು ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
(ಮಾಹಿತಿ ಕೃಪೆ: ಇಮ್ರಾನ್ ಸಾಗರ)
Discussion about this post