ಶಿವಮೊಗ್ಗ: ನಗರದ ಜನನಿಬಿಡ ಪ್ರದೇಶವಾದ ಕಸ್ತೂರ ಬಾ ಕಾಲೇಜು ಮುಂಭಾಗದಲ್ಲಿ ನಿನ್ನೆ ರಾತ್ರಿ ಯುವಕನ ಮೇಲೆ ಲಾಂಗು ಮಚ್ಚುಗಳಿಂದ ಹಲ್ಲೆ ಮಾಡಲಾಗಿದೆ.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತ ಎನ್ನಲಾದ ಸುಮನ್ ಎನ್ನುವ ಯುವಕನ ಮೇಲೆ ಬೈಕ್’ನಲ್ಲಿ ಆಗಮಿಸಿದ ಮುಸುಕುಧಾರಿಗಳು ಹಿಂದಿನಿಂದ ಬಂದು ಗಂಭೀರವಾಗಿ ಹಲ್ಲೆ ನಡೆಸಿದ್ದಾರೆ.
ಗಾಯಗೊಂಡಿರುವ ಸುಮನ್ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ವೇಳೆ ಘೋಷಣೆ ಕೂಗಿದ ವಿವಾದವೊಂದಕ್ಕೆ ಸಂಬಂಧಿಸಿದಂತೆ ಹಲ್ಲೆ ನಡೆದಿದೆ ಎನ್ನಲಾಗಿದ್ದರೂ, ನಿಖರ ಕಾರಣ ತಿಳಿದುಬಂದಿಲ್ಲ.
Discussion about this post