ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಹಿಂದೂ ಕಾರ್ಯಕರ್ತ ಹರ್ಷನ ಹತ್ಯೆ ಹಿನ್ನೆಲೆಯಲ್ಲಿ ಭುಗಿಲೆದ್ದಿರುವ ಹಿಂಸಾಚಾರ ನಿಗ್ರಹಿಸಿ, ಕಾನೂನು-ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಎರಡು ದಿನ ಕರ್ಫ್ಯೂ ಹೇರಲಾಗಿದೆ.
Also Read: ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ನಾಳೆಯೂ ಶಾಲಾ-ಕಾಲೇಜಿಗೆ ರಜೆ ಘೋಷಣೆ

ಇಂದು ಮುಂಜಾನೆಯಿಂದ ಆರಂಭಗೊಂಡ ಹಿಂಸಾಚಾರ ಮಧ್ಯಾಹ್ನದ ವೇಳೆಗೆ ತೀವ್ರಗೊಂಡಿದ್ದು, ಸಿಕ್ಕ ಸಿಕ್ಕ ವಾಹನಗಳು, ಅಂಗಡಿಗಳು ಬೆಂಕಿಗೆ ಆಹುತಿಯಾಗಿದ್ದು, ಪರಿಸ್ಥಿತಿ ನಿಯಂತ್ರಿಸುವುದು ಪೊಲೀಸರಿಗೆ ಸವಾಲಾಗಿ ಪರಿಣಮಿಸಿದೆ. ಹೀಗಾಗಿ, ಬುಧವಾರ ಮುಂಜಾನೆವರೆಗೂ ನಗರ ವ್ಯಾಪ್ತಿಯಲ್ಲಿ ಕರ್ಫ್ಯೂ ಹೇರಲಾಗಿದೆ.
Also Read: ಅಮೆರಿಕಾದ ಅಥೆನ್ಸ್ ವಿವಿಯೊಂದಿಗೆ ಶೈಕ್ಷಣಿಕ ಒಪ್ಪಂದಕ್ಕೆ ಸಹಿ ಹಾಕಲಿರುವ ಕುವೆಂಪು ವಿವಿ
ನಗರ ವ್ಯಾಪ್ತಿಯಲ್ಲಿ ಯಾರೂ ಅನಾವಶ್ಯಕವಾಗಿ ಮನೆಗಳಿಂದ ಹೊರಕ್ಕೆ ಬರಬಾರದು ಎಂದು ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀ ಪ್ರಸಾದ್ ಹೇಳಿದ್ದಾರೆ.
ಇನ್ನು, ಅಹಿತಕರ ಘಟನೆ ಹಿನ್ನೆಲೆಯಲ್ಲಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಬೆಂಗಳೂನಿಂದ ಹೆಚ್ಚುವರಿ ಭದ್ರತಾ ಸಿಬ್ಬಂದಿಗಳನ್ನು ನಗರಕ್ಕೆ ಕರೆಸಿಕೊಳ್ಳಲಾಗುತ್ತಿದೆ. ಈಗಾಗಲೇ ನಗರದ ಹಲವು ಪ್ರದೇಶಗಳಲ್ಲಿ ಕೆಎಸ್’ಆರ್’ಪಿ ಹಾಗೂ ಆರ್’ಎಎಫ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















