ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗಿರುವ ಕಾಂಗ್ರೆಸ್ ಮುಖಂಡ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ಶನಿವಾರಕ್ಕೆ ಮುಂದೂಡಲಾಗಿದ್ದು, ಅಲ್ಲಿಯವರೆಗೂ ಇವರಿಗೆ ತಿಹಾರ್ ಜೈಲೇ ಗತಿಯಾಗಿದೆ.
ಅರ್ಜಿ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ಅಜಯ್ ಕುಮಾರ್ ಕುಹರ್ ಅವರು ವಿಚಾರಣೆಯನ್ನು ಶನಿವಾರಕ್ಕೆ ಮುಂದೂಡಿದ್ದಾರೆ.
ವಿಚಾರಣೆ ವೇಳೆ ಇಡಿ ಪರ ವಾದಿಸಿದ ವಕೀಲ ನಟರಾಜ್ ಅವರು, ಶಿವಕುಮಾರ್ ಅವರ ಆದಾಯ ಮೂಲ ಯಾವುದು? ಅದನ್ನು ಪತ್ತೆಹಚ್ಚಬೇಕಲ್ಲವೇ? ಹಫ್ತಾ ನೀಡಿ ಕೊಲೆ ಮಾಡಿಸಿದರೆ ಎಷ್ಟು ಹಫ್ತಾ ನೀಡಿದ್ದಾರೆ ಎಂಬುದು ಮುಖ್ಯವಾಗುವುದಿಲ್ಲ. ಕೊಲೆ ಮಾಡಿಸಲು ಹಫ್ತಾ ನೀಡಿದ್‌ದಾರೆ ಎನ್ನುವುದಷ್ಟೇ ಮುಖ್ಯ. ಈ ಪ್ರಕರಣದಲ್ಲಿ ಹಣದ ಮೌಲ್ಯಕ್ಕಿಂತ ಅವರು ಮನಿ ಲಾಂಡ್ರಿಂಗ್ ಮಾಡಿದ್ದಾರೆ ಎಂಬುದು ಮುಖ್ಯ ಎಂದು ವಾದಿಸಿದರು.
ಡಿಕೆಶಿ ಆರೋಗ್ಯ ಯಥಾಸ್ಥಿತಿಗೆ ಬಂದಿರುವುದಾಗಿ ವೈದ್ಯರು ವರದಿ ನೀಡಿದ್ದರಿಂದ ಪೊಲೀಸರು ತಿಹಾರ್ ಜೈಲಿಗೆ ಕರೆದೊಯ್ದಿದ್ದು, ತಿಹಾರ್ ಜೈಲಿನ ಸೆಲ್ ನಂ.7ರಲ್ಲಿ ಡಿಕೆಶಿಯನ್ನು ಇಡಲಾಗಿದೆ.







Discussion about this post