ಬೆಂಗಳೂರು: ಕರ್ನಾಟಕ ರಾಜ್ಯ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಮಗದ ಅಧ್ಯಕ್ಷರನ್ನಾಗಿ ಜಿಲ್ಲಾ ಬಿಜೆಪಿ ಮುಖಂಡ ಡಿ.ಎಸ್. ಅರುಣ್ ಅವರನ್ನು ನೇಮಕ ಮಾಡಲಾಗಿದೆ.
ಈ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶ ಹೊರಡಿಸಿದ್ದು, ತತಕ್ಷಣವೇ ಇವರ ನೇಮಕಾತಿ ಜಾರಿಗೆ ಬಂದಿದ್ದು, ರಾಜ್ಯ ಸಚಿವ ಸಂಪುಟ ದರ್ಜೆ ಸ್ಥಾನಮಾನಗಳನ್ನು ನೀಡಲಾಗಿದೆ.
ಪಕ್ಷದ ಶಿಸ್ತಿನ ಸಿಪಾಯಿಯಾಗಿ ನಿರಂತರವಾಗಿ ಶ್ರಮಿಸಿದ ಡಿ.ಎಸ್. ಅರುಣ್ ಅವರಿಗೆ ಈ ಸ್ಥಾನಮಾನ ದೊರೆತಿದ್ದಕ್ಕಾಗಿ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಇವರನ್ನು ಅಭಿನಂದಿಸುತ್ತದೆ.
Discussion about this post