ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಎಸ್’ಎಸ್’ಎಲ್’ಸಿ ಕಲಿಕೆಯಲ್ಲಿ ಹಿಂದುಳಿದ ನಗರದ ಆಯ್ದ ಶಾಲಾ ಮಕ್ಕಳಿಗೆ ಪುನಶ್ಚೇತನ ಹಾಗೂ ತರಬೇತಿ ಕಾರ್ಯಾಗಾರವನ್ನು ಡಿ.23ರ ಸೋಮವಾರ ಆಯೋಜಿಸಲಾಗಿದೆ.
ಸಿಹಿಮೊಗೆ ಸಂಯುಕ್ತ ವಿಶ್ರಾಂತ ನೌಕರರ ಸಂಘ ಹಾಗೂ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮೀನಾಕ್ಷಿ ಭವನದ ಬಳಿಯಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಕಾರ್ಯಾಗಾರ ನಡೆಲಿದೆ.
ಅಂದು ಮುಂಜಾನೆ 10.30ಕ್ಕೆ ಕಾರ್ಯಾಗಾರ ಆರಂಭವಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಉದ್ಘಾಟಿಸಲಿದ್ದಾರೆ.
ಅಸ್ಥಿತ್ವಕ್ಕೆ ಬಂದಾಗಿನಿಂದಲೂ ಸಿಹಿಮೊಗೆ ಸಂಯುಕ್ತ ವಿಶ್ರಾಂತ ನೌಕರರ ಸಂಘ ಒಂದಿಲ್ಲೊಂದು ಸಮಾಜಮುಖಿ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿದ್ದು, ಈಗ ವಿದ್ಯಾರ್ಥಿಗಳಿಗಾಗಿ ಇಂತಹ ಕಾರ್ಯಾಗಾರ ಆಯೋಜನೆ ಮಾಡಿರುವುದು ಶ್ಲಾಘನೀಯ ಕಾರ್ಯವಾಗಿದೆ.
Get in Touch With Us info@kalpa.news Whatsapp: 9481252093

















