ಕಲ್ಪ ಮೀಡಿಯಾ ಹೌಸ್ | ದಕ್ಷಿಣಕನ್ನಡ/ಶಿವಮೊಗ್ಗ |
ಕಳೆದ ವಾರ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಅಬ್ಬರಿಸಿ ಬೊಬ್ಬಿರಿದಿದ್ದ ವರುಣ ನಿನ್ನೆಯಿಂದ ಕೊಂಚ ಶಾಂತವಾಗಿದ್ದಾನೆ.
ಕರಾವಳಿ ಮಳೆ ಮುನ್ಸೂಚನೆ:
ಹವಾಮಾನ ಇಲಾಖೆಯ ವರದಿಯಂತೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಆರೆಂಜ್ ಹಾಗೂ ಜುಲೈ 27ರವೆರಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಮಲೆನಾಡು ಜಿಲ್ಲೆಗಳಲ್ಲಿನ ಮುನ್ಸೂಚನೆ:
ಇನ್ನು, ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಇಂದು ಆರೆಂಜ್ ಹಾಗೂ ಕೊಡಗು, ಹಾಸನ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಇಂದು ಮುಂಜಾನೆಯ ವರದಿಯಂತೆ ನಾಳೆಯಿಂದ ಜುಲೈ 27ರವರೆಗೂ ಈ ನಾಲ್ಕೂ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇಲ್ಲ.
ಬೆಳಗಾವಿ, ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ನಾಳೆಯಿಂದ ಮಳೆಯ ಸಾಧ್ಯತೆಯಿಲ್ಲ ಎಂದು ವರದಿ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post