ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ದಕ್ಷಿಣ ಕನ್ನಡ: ಮಂಗಳೂರು-ಬೆಂಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಕೆಂಪುಹೊಳೆ ಸಮೀಪ ಕಾಡಾನೆ ದಾಳಿ ನಡೆಸಿದ ಪರಿಣಾಮ ಲಾರಿ ಚಾಲಕನೋರ್ವ ಮೃತಪಟ್ಟ ಘಟನೆ ನಡೆದಿದೆ.
ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಲಾರಿಯ ಚಾಲಕ ಕೆಂಪುಹೊಳೆ ಸಮೀಪ ಲಾರಿ ನಿಲ್ಲಿಸಿ ಮೂತ್ರ ವಿಸರ್ಜನೆಗೆ ತೆರಳಿದ್ದು, ಆ ವೇಳೆ ಕಾಡಾನೆ ದಾಳಿ ನಡೆಸಿ ಚಾಲಕನನ್ನು ಕೊಂದು ಹಾಕಿದೆ. ಮೃತ ಚಾಲಕನನ್ನು ರಾಜಸ್ಥಾನದ ಮೂಲದವರೆಂದು ಗುರುತಿಲಾಗಿದೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post