ಕಲ್ಪ ಮೀಡಿಯಾ ಹೌಸ್ | ದಕ್ಷಿಣ ಕನ್ನಡ |
ಧರ್ಮಸ್ಥಳದಿಂದ Dharmasthala ಮಡಿಕೇರಿಗೆ Madikeri ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿ ಹೊಳೆಗೆ ಬಿದ್ದಿರುವ ಘಟನೆ ಸುಳ್ಯದ ಸಂಪಾಜೆ ಸಮೀಪ ನಡೆದಿದೆ.
ಧರ್ಮಸ್ಥಳದಿಂದ ಸುಳ್ಯ ಮೂಲಕ ಮಡಿಕೇರಿ ಕಡೆಗೆ ಸಾಗುತ್ತಿದ್ದ ಕೆಎಸ್ ಆರ್ ಟಿಸಿ ಬಸ್ KSRTC Bus ಸಂಪಾಜೆಯ ಗಡಿಕ್ಕಲು ಸಮೀಪ ಟಯರ್ ಸ್ಫೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದಿದೆ. ಘಟನೆಯಲ್ಲಿ ಹಲವರಿಗೆ ಗಾಯವಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
Also read: ಅಪ್ಪು ಅಭಿಮಾನಿಗಳಿಗೆ ಮತ್ತೊಂದು ಗುಡ್ ನ್ಯೂಸ್! ಪುನೀತ್ ಕನಸಿನ ಗಂಧದಗುಡಿ ಫಸ್ಟ್ ಲುಕ್ ರಿವೀಲ್
ಅಪಘಾತಕ್ಕೀಡಾದ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 25ಗೆ ಮಂದಿಗೆ ಗಾಯಗಳಾಗಿದ್ದು, ಅವರನ್ನು ಸುಳ್ಯದ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post