ಕಲ್ಪ ಮೀಡಿಯಾ ಹೌಸ್ | ಬಂಟ್ವಾಳ |
ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ರಸ್ತೆ ಮೇಲೆ ಪಲ್ಟಿಯಾಗಿದ್ದು 10ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಇಲ್ಲಿನ ಫರಂಗಿಪೇಟೆ ಸಮೀಪದಲ್ಲಿ ನಡೆದಿದೆ.
ಇಲ್ಲಿನ 10ನೇ ಮೈಲಿಕಲ್ಲಿನ ಬಳಿಯಲ್ಲಿ ಇಂದು ಮುಂಜಾನೆ ಘಟನೆ ನಡೆದಿದ್ದು, ಪಲ್ಟಿಯಾದ ಬಸ್ ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ.
ಚಾಲಕನ ಅತಿ ವೇಗದ ಚಾಲನೆ ಅಥವಾ ವಾಹನದಲ್ಲಿ ಕಂಡ ತಾಂತ್ರಿಕ ದೋಷದಿಂದ ಅಪಘಾತ ಸಂಭವಿಸಿಬಹುದು ಎಂದು ಅಂದಾಜಿಸಲಾಗಿದೆ. ಆದರೂ ನಿಖರ ಕಾರಣ ತಿಳಿದುಬಂದಿಲ್ಲ.
ಗಾಯಗೊಂಡ ಎಲ್ಲರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳೀಯ ಯುವಕರು ಗಾಯಗೊಂಡವರನ್ನು ಬಸ್ಸಿನಿಂದ ಹೊರತೆಗೆದು ರಸ್ತೆಯಲ್ಲಿ ಸಾಗುತ್ತಿದ್ದ ವಾಹನಗಳಲ್ಲಿ ಆಸ್ಪತ್ರೆಗೆ ಸೇರಿಸಲಾಯಿತು.
ಬಂಟ್ವಾಳ ಸಂಚಾರ ಪೊಲೀಸರು ಭೇಟಿ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post