ಕಲ್ಪ ಮೀಡಿಯಾ ಹೌಸ್ | ದಕ್ಷಿಣ ಕನ್ನಡ |
ಅಡ್ಯಾರ್ ಗಾರ್ಡನ್ ನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ ಅವರಿಗೆ ಹಿಂದುಳಿದ ವರ್ಗಗಳ ಮೋರ್ಚಾಕ್ಕೆ ಅತ್ಯುತ್ತಮ ಕಾರ್ಯಕ್ರಮ ಮಾಡಿರುವ ಹಿನ್ನೆಲೆ ಬಹುಮಾನ ನೀಡಿ ಗೌರವಿಸಲಾಯಿತು.
ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರವರೆಗೆ ನಡೆದ ಸೇವಾ ಪಾಕ್ಷಿಕ ಕಾರ್ಯಕ್ರಮದಲ್ಲಿ ಕೊಟ್ಟಿರುವ ಎಲ್ಲಾ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಪೂರೈಸಿ, ಸುಮಾರು 5800 ಗಿಡಗಳನ್ನು ನೆಡುವ ಮೂಲಕ ಹಿಂದುಳಿದ ವರ್ಗಗಳ ಮೋರ್ಚಾ ಉತ್ತಮ ಕಾರ್ಯವನ್ನು ನಿರ್ವಹಿಸಿದೆ.
ಬಹುಮಾನಕ್ಕೆ ಕಾರಣಕರ್ತರಾದ ಜಿಲ್ಲೆಯ ಪದಾಧಿಕಾರಿಗಳು ಹಾಗು ಎಲ್ಲಾ ಮಂಡಲಗಳ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಪ್ರಧಾನ ಕಾರ್ಯದರ್ಶಿಗಳಿಗೆ ಹಾಗೂ ಪದಾಧಿಕಾರಿಗಳಿಗೆ ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯಕರ್ತ ಬಂಧುಗಳಿಗೆ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ ಧನ್ಯವಾದ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















