ಕಲ್ಪ ಮೀಡಿಯಾ ಹೌಸ್ | ದಕ್ಷಿಣ ಕನ್ನಡ |
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಮಂಗಳೂರು ನ್ಯಾಯಾಲಯ ಸಂಕೀರ್ಣದಲ್ಲಿ ಇದೇ ಮೊದಲ ಬಾರಿಗೆ ಕಾನೂನು ನೆರವು ಅಭಿರಕ್ಷಕರ (ಡಿಫೆನ್ಸ್ ಕೌನ್ಸೆಲ್) ಕಚೇರಿ ಕಾರ್ಯಾರಂಭ ಮಾಡಿದೆ.
ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಜೆ. ವೀರಪ್ಪ ಕಾನೂನು ನೆರವು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಭಿರಕ್ಷಕರ ಕಚೇರಿಯನ್ನು ಏಕಕಾಲಕ್ಕೆ ಲೋಕಾರ್ಪಣೆ ಮಾಡಿದರು.
ಮಂಗಳೂರಿನ ನ್ಯಾಯಾಲಯ ಸಂಕೀರ್ಣದಲ್ಲಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ರವೀಂದ್ರ ಜೋಷಿ ಅವರು ಕಚೇರಿಯನ್ನು ವಿಧ್ಯುಕ್ತವಾಗಿ ಉದ್ಘಾಟಿಸಿದರು.
ಮಂಗಳೂರಿನ ಹಿರಿಯ ನ್ಯಾಯವಾದಿ ವಾಸುದೇವ ಗೌಡ ಅವರು ಮುಖ್ಯ ಡಿಫೆನ್ಸ್ ಕೌನ್ಸೆಲ್ ಆಗಿ ಅಧಿಕಾರ ವಹಿಸಿಕೊಂಡರು. ಉಪ ಡಿಫೆನ್ಸ್ ಕೌನ್ಸೆಲ್ ಆಗಿ ಶುಕರಾಜ ಕೊಟ್ಟಾರಿ ಹಾಗೂ ಸಹಾಯಕ ಡಿಫೆನ್ಸ್ ಕೌನ್ಸೆಲ್ ಆಗಿ ಕೃಷ್ಣ ಅಧಿಕಾರ ಸ್ವೀಕರಿಸಿದರು.
ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಬಿ.ಜಿ. ಶೋಭಾ, ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಪೃಥ್ವಿರಾಜ್ ರೈ, ಕಾರ್ಯದರ್ಶಿ ಶ್ರೀಧರ ಎಣ್ಮಕಜೆ, ಹಿರಿಯ ವಕೀಲರಾದ ಇಬ್ರಾಹಿಂ ಹಾಗೂ ವಿವಿಧ ನ್ಯಾಯಾಧೀಶರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post