ಕಲ್ಪ ಮೀಡಿಯಾ ಹೌಸ್ | ದಕ್ಷಿಣ ಕನ್ನಡ |
ಧರ್ಮಸ್ಥಳ #Dharmasthala ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣ ಸಂಬಂಧಿಸಿದಂತೆ ದೂರುದಾರ ಗುರುತಿಸಿದ್ದ 13 ಜಾಗಗಳಲ್ಲಿ 6ನೇ ಪಾಯಿಂಟ್‌ನಲ್ಲಿ ಎರಡು ಅಸ್ಥಿಪಂಜರಗಳು #Skeleton ಪತ್ತೆಯಾಗಿದೆ ಎಂದು ವರದಿಯಾಗಿದೆ.
ದೂರುದಾರ ಗುರುತಿಸಿದ ಸ್ಥಳಗಳ ಪೈಕಿ ಇದೀಗ 6ನೇ ಪಾಯಿಂಟ್‌ನಲ್ಲಿ 15 ಕಾರ್ಮಿಕರಿಂದ ಉತ್ಖನನ ನಡೆಯುತ್ತಿದ್ದು, ಎರಡು ಅಸ್ಥಿಪಂಜರ ಪತ್ತೆಯಾಗಿದೆ. ದೇಹದ ಪೂರ್ತಿ ಭಾಗಗಳು ಸಿಕ್ಕಿಲ್ಲ, ತಲೆ ಬುರುಡೆ ಸೇರಿದಂತೆ ಕೆಲವು ಭಾಗಗಳು ಮಾತ್ರ ಸಿಕ್ಕಿದ್ದು, ಇನ್ನೂ ಆಳಕ್ಕೆ ತೆಗೆದು ಹುಡುಕಾಟ ನಡೆಸಲಾಗುತ್ತಿದೆ. ಸದ್ಯ ಸಿಕ್ಕಿರುವ ಕಳೇಬರವನ್ನು ಎಸ್‌ಐಟಿ ಅಧಿಕಾರಿಗಳು ಎಫ್‌ಎಸ್‌ಎಲ್‌ಗೆ ಕಳುಹಿಸಲಿದ್ದಾರೆ ಎನ್ನಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post