ಕಲ್ಪ ಮೀಡಿಯಾ ಹೌಸ್ | ದಕ್ಷಿಣ ಕನ್ನಡ |
ಭಾರತ ಸರ್ಕಾರವು ಶ್ರೀ ಕ್ಷೇತ್ರ ಧರ್ಮಸ್ಥಳ Shri Kshetra Dharmasthala ಧರ್ಮಾಧಿಕಾರಿ ಪದ್ಮವಿಭೂಷಣ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ಬು Dr. D. Veerendra Heggade ರಾಜ್ಯಸಭೆ ಸದಸ್ಯರನ್ನಾಗಿ ನಾಮನಿರ್ದೇಶನಗೊಳಿಸಿರುವುದಕ್ಕೆ ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ತುಂಬು ಸಂತಸ ವ್ಯಕ್ತಪಡಿಸಿದ್ದಾರೆ.
ಶ್ರೀ ಕ್ಷೇತ್ರದ ಮೂಲಕ ರಾಷ್ಟ್ರದ ಏಳಿಗೆಗೆ ಬಹುಮುಖಿ ಹಾಗೂ ಅತ್ಯಂತ ಪರಿಣಾಮಕಾರಿಯಾದ ಕೊಡುಗೆ ಮತ್ತು ಕೈಂಕರ್ಯಗಳನ್ನು ನಿರ್ವಹಿಸುತ್ತಿರುವ ಹೆಗ್ಗಡೆಯವರ ನಿಯುಕ್ತಿಯಿಂದ ರಾಜ್ಯಸಭೆಯ ಘನತೆ ನೂರ್ಮಡಿಸಿದಂತಾಗಿದೆ. ನಾವು ಮಾತ್ರವಲ್ಲ, ಇಡೀ ನಾಡೇ ಈ ಆಯ್ಕೆಯಿಂದ ಸಂತಸಪಡುವಂತಾಗಿದೆ ಎಂದು ತಿಳಿಸಿದ್ದಾರೆ.
ಹೆಗ್ಗಡೆಯವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಅವರಿಗೆ ಶ್ರೀಕೃಷ್ಣನ ಪೂರ್ಣಾನುಗ್ರಹವನ್ನು ಪ್ರಾರ್ಥಿಸುತ್ತೇವೆ ಎಂದು ಶ್ರೀಗಳು ಸಂದೇಶನೀಡಿದ್ದಾರೆ.
Also read: ಆ.7ರಿಂದ ಗುರುಗುಹ ಗಾಯನ ಅಭಿಯಾನ: ಸಂಗೀತದ ಹಿನ್ನೆಲೆಯ ಅವಶ್ಯಕತೆಯಿಲ್ಲ! ಆಸಕ್ತರಿಗಾಗಿ ಇಲ್ಲಿದೆ ಮಾಹಿತಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post